ಗುಜರಾತ್ ನಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿ ಘೋಷಣೆ- ಹೊಸ ತಂತ್ರಗಾರಿಗೆ ಹೆಣೆದ ಅಮಿತ್ ಶಾ!

ಗುಜರಾತ್ ನಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿ ಘೋಷಣೆ- ಹೊಸ ತಂತ್ರಗಾರಿಗೆ ಹೆಣೆದ ಅಮಿತ್ ಶಾ!

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ತವರು ರಾಜ್ಯದಲ್ಲಿ ಸತತ ಏಳನೇ ಬಾರಿ ಅಧಿಕಾರದ ಗದ್ದುಗೆ ಏರುವ ಲೆಕ್ಕಾಚಾರದಲ್ಲಿರುವ ಬಿಜೆಪಿ ಹೊಸ ತಂತ್ರಗಾರಿಕೆ ಹೆಣೆದಿದೆ. ಬಿಜೆಪಿಯ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.

ಗುಜರಾತ್ ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಒಟ್ಟು 182 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲಾ ಸವಾಲುಗಳನ್ನು ಮೀರಿ ಮತ್ತೊಮ್ಮೆ ಅಧಿಕಾರಕ್ಕೇರುವುದು ನಿಶ್ಚಿತ ಎಂಬ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆಯಿರಿ – ಆಪ್ ಮನವಿ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್, ಗುಜರಾತ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಎನ್ನುವ ಮೂಲಕ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.

ಭೂಪೇಂದ್ರ ಪಟೇಲ್ ಅವರು 2021ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದರು. ಅವರು ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದಾರೆ. 2021ರ ಸೆಪ್ಟಂಬರ್ ನಲ್ಲಿ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿ ಅಂದಿನ ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾಣಿ ಅವರನ್ನು ಬದಲಾಯಿಸಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ನೇಮಿಸಿತ್ತು.

ಈಗಾಗಲೇ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ, ಇಸುದನ್ ಗದ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ. ಆದರೆ  ಗುಜರಾತ್ ನ ವಿಧಾನಸಭೆಯಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಮಾತ್ರ ಸಿಎಂ ಆಭ್ಯರ್ಥಿಯನ್ನು ಘೋಷಣೆ ಮಾಡದಿರಲು ನಿರ್ಧರಿಸಿದೆ.

suddiyaana