ಪ್ರಚಾರದ ಕಾವು ಹೆಚ್ಚಿಸಿದ ಬಿಜೆಪಿ – ಏ.21, 22ರಂದು ದಾವಣಗೆರೆ, ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ

ಪ್ರಚಾರದ ಕಾವು ಹೆಚ್ಚಿಸಿದ ಬಿಜೆಪಿ – ಏ.21, 22ರಂದು ದಾವಣಗೆರೆ, ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ

ರಾಜ್ಯದಲ್ಲಿ ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಶುಕ್ರವಾರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಕೊನೆಗೊಳ್ಳಲಿದೆ. ಇದೀಗ ಪ್ರಚಾರದ ಕಾವು ಹೆಚ್ಚಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಇದರ ಭಾಗವಾಗಿ ಏಪ್ರಿಲ್ 21 ಮತ್ತು 22 ರಂದು ದಾವಣಗೆರೆ ಮತ್ತು ದೇವನಹಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ಈಗಾಗಲೇ ಚುನಾವಣೆ ಅಖಾಡಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧುಮುಕಿದ್ದು, ಇದರ ಬೆನ್ನಲ್ಲೇ ಅಮಿತ್ ಶಾ ಹಾಗೂ ಮೋದಿ ಜೋಡಿ ಕಮಾಲ್ ಮಾಡಲು ಸಿದ್ಧವಾಗಿದೆ.

ಇದನ್ನೂ ಓದಿ: ಅಪ್ಪನ ಅಂಬಾಸಿಡರ್ ಕಾರಿನಲ್ಲಿ ತೆರಳಿ ವಿಜಯೇಂದ್ರ ನಾಮಿನೇಷನ್ – ಬಿಎಸ್‌ವೈಗೆ ಈ ಕಾರು ಎಷ್ಟು ಲಕ್ಕಿ ಗೊತ್ತಾ?

ಏಪ್ರಿಲ್ 21 ರಿಂದ 23 ರವರೆಗೆ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ  ಪ್ರವಾಸದಲ್ಲಿರಲಿದ್ದು, ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಷ್ಟೇ ಅಲ್ಲದೇ ಕೆಲವು ಪ್ರಮುಖ ಮಠಾಧೀಶರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಅಮಿತ್ ಶಾ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದು ಪ್ರಚಾರದ ಕಾರ್ಯತಂತ್ರ ಹೆಣೆಯಲಿದ್ದಾರೆ ಅಂತಾ ಬಿಜೆಪಿ ಮೂಲಗಳು ಮಾಹಿತಿ ನೀಡಿವೆ.

ಇನ್ನು ಅಮಿತ್ ಶಾ ಬೆನ್ನಲ್ಲೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ  ಏಪ್ರಿಲ್ 25ರ ಬಳಿಕ ರಾಜ್ಯದಲ್ಲಿ ಸುಮಾರು 15 ರಿಂದ 20 ರೋಡ್ ಶೋ, ಸಮಾವೇಶ, ರ‍್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಚುನಾವಣೆ ಘೋಷಣೆಗೂ ಮುನ್ನ ರಾಜ್ಯಕ್ಕೆ 7 ಬಾರಿ ಭೇಟಿ ನೀಡಿದ್ದರು. ಆ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಮೋದಿ ಪ್ರಚಾರ ಮಾಡಲಿದ್ದಾರೆ. ಈ ಪ್ರಚಾರದಲ್ಲಿ ಬಂಡಾಯ ನಾಯಕರ ಕ್ಷೇತ್ರಗಳು ಪ್ರಮುಖವಾಗಿರಲಿವೆ ಅಂತಾ ಹೇಳಲಾಗುತ್ತಿದೆ.

suddiyaana