ಹಾವೇರಿ, ಧಾರವಾಡ ಟಿಕೆಟ್ ಮಿಸ್‌ – ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

ಹಾವೇರಿ, ಧಾರವಾಡ ಟಿಕೆಟ್ ಮಿಸ್‌ – ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಎಲ್ಲಾ ಪಕ್ಷಗಳು ಭರದಿಂದ ಸಿದ್ಧತೆ ನಡೆಸುತ್ತಿವೆ. ಬುಧವಾರ ಬಿಜೆಪಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಸೇರಿ ಒಟ್ಟು 72 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಹಾವೇರಿ ಮತ್ತು ಧಾರವಾಡ ಲೋಕಸಭೆ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್‌ ಮಿಸ್‌ ಆಗಿದೆ. ಬಿಜೆಪಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್‌ಗೆ ಮತ್ತೊಂದು ಆಫರ್‌ ನೀಡಿದ್ದಾರೆ.

ಇದನ್ನೂ ಓದಿ: ಶ್ವಾನ ಪ್ರಿಯರೇ ಹುಷಾರ್‌.. – ಇನ್ಮುಂದೆ ಪಿಟ್​ಬುಲ್​, ಬುಲ್​ ಡಾಗ್​ ಸೇರಿ 23 ತಳಿಗಳನ್ನು ಸಾಕಂಗಿಲ್ಲ!

ಹೌದು, ಹಾವೇರಿ ಮತ್ತು ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಟಿಕೆಟ್‌ ಮಿಸ್‌ ಆಗಿರೋದಿಕ್ಕೆ ಜಗದೀಶ್‌ ಶೆಟ್ಟರ್‌ ಅವರಿಗೆ ನಿರಾಸೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಸಮಧಾನ ಹೊರಹಾಕಿದ್ದಾರೆ. ಇದೀಗ ಅಮಿತ್‌ ಶಾ ಶೆಟ್ಟರ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಅಮಿತ್ ಶಾ ಜೊತೆ ಮಾತನಾಡಿರುವ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚಿಸಲು ಕಾಲಾವ ಕೇಳಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಿದರೆ ಸೋಲುವ ಬಗ್ಗೆ ಶೆಟ್ಟರ್​​ಗೆ ಭೀತಿ ಇದೆ ಎನ್ನಲಾಗಿದೆ. ಹೀಗಾಗಿ ಅವರು ಕಾಲಾವಕಾಶ ಕೇಳಿರುವ ಸಾಧ್ಯತೆ ಇದೆ. ಆದರೆ ಖುದ್ದು ಅಮಿತ್ ಶಾ ಸೂಚನೆ ನೀಡಿರುವುದರಿಂದ ಶೆಟ್ಟರ್ ಪರಿಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.

ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಶೆಟ್ಟರ್, ಹುಬ್ಬಳ್ಳಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ ಅವರನ್ನು ವಿಧಾನ ಪರಿಷತ್ ಸದಸ್ಯನನ್ನಾಗಿ ಕಾಂಗ್ರೆಸ್ ಮಾಡಿತ್ತು. ಆದರೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೆ ಬಿಜೆಪಿ ಪರ ವಾಲಿದ್ದ ಶೆಟ್ಟರ್, ಲೋಕಸಭೆ ಟಿಕೆಟ್ ಆಕಾಂಕ್ಷಿಯೊಂದಿಗೆ ಘರ್ ವಾಪ್ಸಿ ಆಗಿದ್ದರು. ಮರಳಿ ಬಿಜೆಪಿ ಸೇರುವ ಸಂದರ್ಭ ಅವರು ಧಾರವಾಡ ಅಥವಾ ಹಾವೇರಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ, ಇದೀಗ ಆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಧಾರವಾಡದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯನ್ನು ಕಣಕ್ಕಿಳಿಸಲಾಗಿದ್ದರೆ, ಹಾವೇರಿಯಿಂದ ಮಾಜಿ ಸಿಎಂ ಬಬಸವರಾಜ ಬೊಮ್ಮಾಯಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಇದರಿಂದ ಶೆಟ್ಟರ್ ನಿರಾಸೆಗೊಂಡಿದ್ದಾರೆ.

Shwetha M