ಕಾಲೇಜಿನ ಅವ್ಯವಸ್ಥೆ ಬಗ್ಗೆ ಮಾತನಾಡಿದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ – ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣ ಒಂದೊಂದೇ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಈ ಪ್ರಕರಣದ ವಿರುದ್ಧ ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಲಾಗಿದ್ದು, ಸಂದೇಶ ಕಳಿಸಿದವರ ವಿರುದ್ಧ ದೂರು ದಾಖಲಾಗಿದೆ.
ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ – ಆರ್‌ಪಿಎಫ್ ಎಎಸ್ ಐ ಸೇರಿ ನಾಲ್ವರು ಸಾವು
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಪ್ರತಿಭಟನೆಗಳು ತೀವ್ರಗೊಂಡಿದೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ರವಾನೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ ಹೇಳಿದ್ದಳು. ಈ ಹಿನ್ನೆಲೆ ಜುಲೈ 28 ರಂದು ಇನ್ಸ್ಟಾಗ್ರಾಮ್ನಲ್ಲಿ ಜಿಗರ್ ಕೋಬ್ರಾ ಎಂಬ ಹೆಸರಿನ ಖಾತೆಯಿಂದ ಬೆದರಿಕೆ, ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ. ಇದು ವಿದ್ಯಾರ್ಥಿನಿಯ ಮಾನಸಿಕ ನೆಮ್ಮದಿಗೆ ಭಂಗ ತಂದಿದೆ. ಈ ವಿಚಾರ ಹಿಂದೂ ಸಂಘಟನೆಗಳಿಗೆ ತಿಳಿದಿದೆ. ನಂತರ ಹಿಂದೂ ಸಂಘಟನೆಗಳು ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಸ್‌ಪಿ ಜೊತೆ ಸಮಾಲೋಚನೆ ಮಾಡಿದ ಬಳಿಕ ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.