ಯುವನಿಧಿ ಯೋಜನೆ ಜಾರಿಗೆ ಸಿದ್ಧವಾಗುತ್ತಿದೆ ರೂಪುರೇಷೆ – ಹಣ ಪಡೆಯಲು ಪದವಿ ವಿದ್ಯಾರ್ಥಿಗಳಿಗೆ ಹಲವು ಷರತ್ತು

ಯುವನಿಧಿ ಯೋಜನೆ ಜಾರಿಗೆ ಸಿದ್ಧವಾಗುತ್ತಿದೆ ರೂಪುರೇಷೆ – ಹಣ ಪಡೆಯಲು ಪದವಿ ವಿದ್ಯಾರ್ಥಿಗಳಿಗೆ ಹಲವು ಷರತ್ತು

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ 5 ಯೋಜನೆಗಳ ಪೈಕಿ ಈಗಾಗಲೇ ಒಂದೊಂದೇ ಯೋಜನೆಗಳನ್ನ ಜಾರಿ ಮಾಡಲಾಗುತ್ತಿದೆ. ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆಗಳಿಗೆ ಈಗಾಗಲೇ ಚಾಲನೆ ಸಿಕ್ಕಿದ್ದು ಇದೀಗ ಗೃಹಲಕ್ಷ್ಮೀ ಯೋಜನೆಗೂ ಮುಹೂರ್ತ ಫಿಕ್ಸ್ ಆಗಿದೆ. ಆದರೆ ಯುವನಿಧಿ ಯೋಜನೆ ಇನ್ನೂ ಕೂಡ ಚರ್ಚೆಗೆ ಬಂದಿಲ್ಲ. ಪದವೀಧರ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆ ಇದಾಗಿದ್ದು, ಜಾರಿ ಸಂಬಂಧ ರೂಪುರೇಷೆಗಳು ಸಿದ್ಧಗೊಳ್ಳುತ್ತಿದ್ದು, ಪದವಿ ಅಥವಾ ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಸಿಗದೆ ಇರುವ ರಾಜ್ಯದ ಪದವೀಧರರಿಗೆ ಈ ಯೋಜನೆ ಅನ್ವಯವಾಗಲಿದೆ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆಯ ಸೌಲಭ್ಯ ಸ್ಥಗಿತಗೊಳ್ಳಲಿದೆ.

ಇದನ್ನೂ ಓದಿ : ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಆಗಸ್ಟ್ ತಿಂಗಳಿನಲ್ಲಿ ಯಜಮಾನಿ ಖಾತೆಗೆ ಹಣ ಜಮೆ

2023 ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ತೇರ್ಗಡೆಯಾದ ನಂತರ 6 ತಿಂಗಳು ಕಳೆದರೂ ಉದ್ಯೋಗ ಲಭಿಸದ ನಿರದ್ಯೋಗಿಗಳಿಗೆ ಪ್ರತಿ ತಿಂಗಳೂ 3000 ರಂತೆ ಉದ್ಯೋಗ ಸಿಗುವವರೆಗೆ ಅಥವಾ 2 ವರ್ಷಗಳ ಅವಧಿಗೆ ನಿರುದ್ಯೋಗ ಭತ್ಯೆ ನೀಡಲು ಯುವನಿಧಿ ಯೋಜನೆ ಘೋಷಣೆ ಮಾಡಲಾಗಿದೆ. ಸದ್ಯ ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 37,654 ನಿರುದ್ಯೋಗಿಗಳಿದ್ದು, ಈ ಪೈಕಿ ಎಷ್ಟು ಜನರಿಗೆ ಇದರ ಲಾಭ ಸಿಗಲಿದೆ ಎಂಬ ಕುತೂಹಲ ಕೆರಳಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಂಡಿರುವ ಪ್ರಕಾರ ಪ್ರಸ್ತುತ ನಿರುದ್ಯೋಗಿ ಪದವೀಧರರ ಸಂಖ್ಯೆ 37,654. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯ ಅಲ್ಲದೆ ಇರುವ ಕಾರಣದಿಂದಾಗಿ ನಿರುದ್ಯೋಗಿಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ ರಾಜ್ಯ ಕಾಂಗ್ರೆಸ್ ಘೋಷಣೆ ಮಾಡಿರುವ ಯುವನಿಧಿ ಗ್ಯಾರಂಟಿ ಇನ್ನೂ ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಯೋಜನೆ ಜಾರಿಯ ಬಗ್ಗೆ ರೂಪುರೇಷೆಗಳು ಸಿದ್ಧಗೊಳ್ಳುತ್ತಿವೆ. ಈ ನಡುವೆ ಕೆಲವೊಂದು ಷರತ್ತುಗಳನ್ನು ಕೂಡಾ ಹಾಕಲಾಗಿದ್ದು, ಯೋಜನೆಗೆ ಅನುಷ್ಠಾದ ಕುರಿತಾಗಿ ಕೆಲವೊಂದು ಗೊಂದಲಗಳು ಇವೆ.

‘ಯುವನಿಧಿ’ಗೆ ಷರತ್ತುಗಳು

  • ಪದವಿ/ ಡಿಪ್ಲೊಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಸಿಗದೆ ಇರುವ ಕನ್ನಡಿಗರಿಗೆ ಅನ್ವಯವಾಗಲಿದೆ.
  • 2 ವರ್ಷಗಳಿಗೆ ಮಾತ್ರ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತಗೊಳ್ಳಲಿದೆ.
  • ಪ್ರತಿ ತಿಂಗಳು ಡಿಬಿಟಿ ಮೂಲಕ ಹಣ ಪಾವತಿ. ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
  • ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು. ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಳ್ಳದಿದ್ದರೆ ದಂಡ ವಿಧಿಸುವ ಅವಕಾಶವೂ ಇದೆ.

 

suddiyaana