ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ – ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್ ಶರ್ಮಿಳಾ ಅರೆಸ್ಟ್

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ – ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್ ಶರ್ಮಿಳಾ ಅರೆಸ್ಟ್

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವೈಎಸ್ಆರ್ ತೆಲಂಗಾಣ ಪಕ್ಷದ ನಾಯಕಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ಸಹೋದರಿ ವೈ.ಎಸ್ ಶರ್ಮಿಳಾ ಅವರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ರಾಜ್ಯ ಸರ್ಕಾರ ನಡೆಸಿದ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿ ಕಚೇರಿಗೆ ತೆರಳುತ್ತಿದ್ದಾಗ ಶರ್ಮಿಳಾ ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ತೀವ್ರ ವಿರೋಧ ವ್ಯಕ್ತಪಡಿಸಿದ ಶರ್ಮಿಳಾ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:  ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ಮತಬೇಟೆ – ಭರ್ಜರಿ ರೋಡ್ ಶೋ

ಪ್ರತಿಭಟನೆ ನಡೆಸದಂತೆ ಮನವರಿಕೆ ಮಾಡಲು ತೆರಳಿದ ಪೊಲೀಸರ ಮೇಲೆ ಶರ್ಮಿಳಾ ಹಲ್ಲೆ ನಡೆಸಿದ್ದಾರೆ.. ತೆಲಂಗಾಣ ರಾಜ್ಯ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ನಂತರ ತೆಲಂಗಾಣದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ಪ್ರಕರಣ ಸಂಬಂಧ 11 ಜನರನ್ನು ಬಂಧಿಸಲಾಗಿದೆ. ಹುದ್ದೆಗಳ ಭರ್ತಿಗೆ ಬಾಕಿಯಿದ್ದ ಮೂರು ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೋರಿಕೆ ಆರೋಪದ ಬಗ್ಗೆ ವಿರೋಧ ಪಕ್ಷಗಳು ಕೆ. ಚಂದ್ರಶೇಖರ ರಾವ್ ಸರ್ಕಾರವನ್ನು ಗುರಿಯಾಗಿಸಿಕೊಂಡಿವೆ.

suddiyaana