ಆಂಧ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು ಮಂಜೂರು

ಆಂಧ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಮಧ್ಯಂತರ ಜಾಮೀನು ಮಂಜೂರು

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಆಂಧ್ರಪ್ರದೇಶ ಹೈಕೋರ್ಟ್ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 9 ರಂದು ಬಂಧಿಸಲಾಗಿತ್ತು. ಜೈಲಿನಲ್ಲಿದ್ದ ಚಂದ್ರಬಾಬು ನಾಯ್ಡು ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಇದನ್ನೂ ಓದಿ: ಪೊಲೀಸರನ್ನು ಕಂಡು ಎಸ್ಕೇಪ್‌ ಆಗಲು ಯತ್ನ! – ಓಡುತ್ತಾ.. ಓಡುತ್ತಾ ನದಿಗೆ ಹಾರಿಯೇ ಬಿಟ್ಟ!

ಅಕ್ಟೋಬರ್ 18 ರಂದು ಕುಟುಂಬದ ಸದಸ್ಯರು ಹಾಗೂ ಟಿಡಿಪಿ ಮುಖಂಡರು ರಾಜಮಹೇಂದ್ರವರಂನ ಸೆಂಟ್ರಲ್ ಜೈಲಿಗೆ ತೆರಳಿದ್ದರು. ಈ ವೇಳೆ ಚಂದ್ರಬಾಬು ನಾಯ್ಡು ಅವರ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಅವರಿಗೆ ವೈದ್ಯಕೀಯ ಪರೀಕ್ಷೆಯ ಅಗತ್ಯತೆ ಇದೆ. ಹೈದರಾಬಾದ್ ಮತ್ತು ವಿಜಯವಾಡದಲ್ಲಿ ಚಂದ್ರಬಾಬು ನಾಯ್ಡು ಅವರು ವೈದ್ಯರ ತಂಡವನ್ನು ಹೊಂದಿದ್ದಾರೆ. ಹೀಗಾಗಿ ನಾಯ್ಡು ಆರೋಗ್ಯದ ರಿಪೋರ್ಟ್‍ಗಳನ್ನು ಅವರಿಗೆ ಕಳುಹಿಸಿದರೆ ಅವರು ಸೂಕ್ತ ವೈದ್ಯಕೀಯ ಸಲಹೆ ನೀಡಲು ಸಾಧ್ಯವಾಗುತ್ತದೆ ಎಂದು ಕೋರ್ಟ್‌ಗೆ ಮನವಿ ಮಾಡಲಾಗಿತ್ತು. ಇದೀಗ ಆಂಧ್ರಪ್ರದೇಶ ಹೈಕೋರ್ಟ್ ಚಂದ್ರಬಾಬು ನಾಯ್ಡು ಅವರಿಗೆ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Shwetha M