ಮಾಜಿ ಸಿಎಂ ರ‍್ಯಾಲಿಯಲ್ಲಿ ಕಾಲ್ತುಳಿತ – ರ‍್ಯಾಲಿ, ಸಾರ್ವಜನಿಕ ಸಭೆ ನಿಷೇಧಿಸಿದ ಆಂದ್ರ ಸರ್ಕಾರ

ಮಾಜಿ ಸಿಎಂ ರ‍್ಯಾಲಿಯಲ್ಲಿ ಕಾಲ್ತುಳಿತ – ರ‍್ಯಾಲಿ, ಸಾರ್ವಜನಿಕ ಸಭೆ ನಿಷೇಧಿಸಿದ ಆಂದ್ರ ಸರ್ಕಾರ

ಅಮರಾವತಿ: ಕಳೆದ ವಾರ ಕಂದುಕೂರಿನಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಡೆಸಿದ್ದ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ, ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಸಾರ್ವಜನಿಕ ಸಭೆಗಳನ್ನು  ಹಾಗೂ ರ‍್ಯಾಲಿ ನಡೆಸುವುದನ್ನು ನಿಷೇಧಿಸಿದೆ.

ಇದನ್ನೂ ಓದಿ: ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ – ಪ್ರದೀಪ್ ಕುಟುಂಬಸ್ಥರಿಗೆ ಕಾಂಗ್ರೆಸ್ ಮುಖಂಡರಿಂದ ಸಾಂತ್ವನ

ಈ ಬಗ್ಗೆ ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಗುಪ್ತಾ ಮಾತನಾಡಿ, ರಸ್ತೆಗಳಲ್ಲಿ ಸಭೆಗಳಿಗೆ ಅನುಮತಿ ನೀಡುವುದನ್ನು ತಪ್ಪಿಸಬೇಕು. ಅಪರೂಪದ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕ ಸಭೆಗಳಿಗೆ ಅನುಮತಿಯನ್ನು ನೀಡಬೇಕು. ಸಾರ್ವಜನಿಕ ಸಂಚಾರ, ತುರ್ತು ಸೇವೆ, ಅಗತ್ಯ ವಸ್ತುಗಳ ಚಲನೆಗೆ ಅಡ್ಡಿಯಾಗದ ರೀತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ಆಯಾ ಜಿಲ್ಲಾಡಳಿತ ಹಾಗೂ ಪೊಲೀಸರು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು  ಅವರು ನಡೆಸುತ್ತಿರುವ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಇತ್ತೀಚೆಗಷ್ಟೇ 11 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ  ರಸ್ತೆಗಳಲ್ಲಿ ರ‍್ಯಾಲಿ, ಸಾರ್ವಜನಿಕ ಸಭೆ ನಡೆಸುವುದನ್ನು ನಿಷೇಧಿಸಿದೆ.

suddiyaana