ಇನ್ನೂ ಬಗೆಹರಿಯದ ತಾಂತ್ರಿಕ ದೋಷ – 14 ಲಕ್ಷಕ್ಕೂ ಅಧಿಕ ಬಿಪಿಎಲ್‌ ಕಾರ್ಡ್‌ ಕುಟುಂಬಗಳಿಗೆ ಪಾವತಿಯಾಗಿಲ್ಲ ಅನ್ನಭಾಗ್ಯದ ಹಣ

ಇನ್ನೂ ಬಗೆಹರಿಯದ ತಾಂತ್ರಿಕ ದೋಷ – 14 ಲಕ್ಷಕ್ಕೂ ಅಧಿಕ ಬಿಪಿಎಲ್‌ ಕಾರ್ಡ್‌ ಕುಟುಂಬಗಳಿಗೆ ಪಾವತಿಯಾಗಿಲ್ಲ ಅನ್ನಭಾಗ್ಯದ ಹಣ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆ ಈಗಾಗಲೇ ಜಾರಿಯಾಗಿದೆ. ಲಕ್ಷಾಂತರ ಪಡಿತರದಾರರು ೀ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಬಿಪಿಎಲ್‌ ಪಡಿತರದಾರರಿಗೆ ಚುನಾವಣೆಗೂ ಮುನ್ನ ಅನ್ನಭಾಗ್ಯ ಯೋಜನೆಯ ಮೂಲಕ 10 ಅಕ್ಕಿ ನೀಡಲಾಗುವುದು ಎಂದು ಕಾಂಗ್ರೆಸ್‌ ಹೇಳಿತ್ತು. ಆದರೆ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡದೇ ಇರುವುದರಿಂದಾಗಿ ಹಿನ್ನೆಡೆಯಾಗಿತ್ತು. ಬಳಿಕ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿಯ ಬದಲು ಹಣವನ್ನು ಬಿಪಿಎಲ್‌ ಕಾರ್ಡುದಾರರಿಗೆ ನೀಡುತ್ತಿದೆ. ಆದರೆ ರಾಜ್ಯದ ಸುಮಾರು 14 ಲಕ್ಷಕ್ಕೂ ಅಧಿಕ ಬಿಪಿಎಲ್‌ ಕಾರ್ಡುದಾರರು  ಅನ್ನ ಭಾಗ್ಯ ಯೋಜನೆಯ ಹಣದಿಂದ ವಂಚಿತರಾಗಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಗಜಪಡೆ ಸ್ವಾಗತಕ್ಕೆ ಸಿದ್ಧವಾಗುತ್ತಿದೆ ಆರಮನೆ ನಗರಿ – ಜಂಬೂಸವಾರಿಗೆ ಮಿಸ್ ಆಗಲಿವೆ ಈ ಎರಡು ಆನೆಗಳು!

ಬಿಪಿಎಲ್‌, ಅಂತ್ಯೋದಯ ಕಾರ್ಡ್‌ದಾರರಿಗೆ ಅಕ್ಕಿ ಬದಲು ಹಣ ವರ್ಗಾವಣೆ ವ್ಯವಸ್ಥೆಯು ರಾಜ್ಯದಲ್ಲಿ ಜು.10ರಿಂದ ಜಾರಿಗೆ ಬಂದಿದೆ. ರಾಜ್ಯಾದ್ಯಂತ 1.27 ಕೋಟಿಗೂ ಅಧಿಕ ಅರ್ಹ ಕಾರ್ಡ್‌ಗಳಿದ್ದು, ಈ ಪೈಕಿ 1,03,68,897 (1.03 ಕೋಟಿಗೂ ಅಧಿಕ) ಕಾರ್ಡ್‌ಗಳಿಗೆ 605.90 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಆದರೆ, ಕಳೆದ ತಿಂಗಳು ಸುಮಾರು 21 ಲಕ್ಷ ಕಾರ್ಡ್‌ಗಳಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಮಾಡಿರಲಿಲ್ಲ. ಈಗ ಆ 21 ಲಕ್ಷ ಕಾರ್ಡ್‌ಗಳ ಪೈಕಿ 7 ಲಕ್ಷ ಕಾರ್ಡ್‌ಗಳ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದ್ದು, ಅವರಿಗೆ ಈ ತಿಂಗಳು ಹಣ ವರ್ಗಾವಣೆಯಾಗಲಿದೆ. ಆದರೆ 14 ಲಕ್ಷಕ್ಕೂ ಅಧಿಕ ಬಿಪಿಎಲ್‌ ಕಾರ್ಡ್‌ಗಳ ತಾಂತ್ರಿಕ ಸಮಸ್ಯೆ ಬಗೆಹರಿಯದೇ ಇರುವುದರಿಂದ ಅನ್ನಭಾಗ್ಯ ಯೋಜನೆಯ ಹಣದಿಂದ ವಂಚಿತರಾಗಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಾರ್ವಜನಿಕ ವಿತರಣೆ (ವಿಜಿಲೆನ್ಸ್‌) ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರಕುಮಾರ್‌ ಗಂಗ್ವಾರ್‌ ಮಾಹಿತಿ ನೀಡಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಣದಿಂದ ವಂಚಿತರಾಗಿರುವ ಸುಮಾರು 14 ಲಕ್ಷ ಕಾರ್ಡ್‌ಗಳ ಸಮಸ್ಯೆಗಳನ್ನು ಗ್ರಾಹಕರಿಗೆ ಮಾಹಿತಿ ನೀಡಿ, ಹಂತ ಹಂತವಾಗಿ ಬಗೆಹರಿಸಲಾಗುವುದು. ಅಕ್ಕಿ ಬದಲು ಹಣವನ್ನು ಕಳೆದ ತಿಂಗಳು ಜಿಲ್ಲಾವಾರು ಹಂತ ಹಂತವಾಗಿ ಬಿಡುಗಡೆ ಮಾಡಲಾಯಿತು. ಆದರೆ, ಈ ಬಾರಿ ಸಚಿವರ ಸೂಚನೆ ಮೇರೆಗೆ ಎಲ್ಲಾಅರ್ಹ ಕಾರ್ಡ್‌ದಾರರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಹಣ ವರ್ಗಾವಣೆ ಮಾಡಲಾಗುವುದು. ಆ. 25, 26ರೊಳಗೆ ಎಲ್ಲರಿಗೂ ಎರಡನೇ ಕಂತಿನ ಹಣ ರವಾನೆಯಾಗಲಿದೆ ಎಂದು ಹೇಳಿದ್ದಾರೆ.

suddiyaana