ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆ- ಡೊನಾಲ್ಡ್ ಟ್ರಂಪ್ ಘೋಷಣೆ
ರಿಪಬ್ಲಿಕನ್ ಪಕ್ಷದಿಂದ ಉಮೇದುವಾರಿಕೆ ಘೋಷಣೆ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆ- ಡೊನಾಲ್ಡ್ ಟ್ರಂಪ್ ಘೋಷಣೆರಿಪಬ್ಲಿಕನ್ ಪಕ್ಷದಿಂದ ಉಮೇದುವಾರಿಕೆ ಘೋಷಣೆ

ಕ್ಯಾಲಿಫೋರ್ನಿಯಾ: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಡೊನಾಲ್ಡ್​ ಟ್ರಂಪ್ ಅಧಿಕೃತವಾಗಿ ಘೋಷಿಸಿದ್ದಾರೆ. ಕಳೆದ ವಾರ ಓಹಿಯೋದಲ್ಲಿ ಚುನಾವಣೆ ಪ್ರಚಾರ ಮಾಡುವಾಗ ಮುಂದಿನ ವಾರ ಬಹಳ ದೊಡ್ಡ ಘೋಷಣೆ ಮಾಡಲಿದ್ದೇನೆ ಎಂದು ಹೇಳುವ ಡೊನಾಲ್ಡ್​ ಟ್ರಂಪ್ ಕುತೂಹಲ ಮೂಡಿಸಿದ್ದರು.

ಇದನ್ನೂ ಓದಿ:  ವಿಶ್ವದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಸಾಮೂಹಿಕ ಸಂಕಲ್ಪ ಅಗತ್ಯ- ಪ್ರಧಾನಿ ಮೋದಿ

2016ರ ಚುನಾವಣೆಯಲ್ಲಿ ಉದ್ಯಮಿ ಮತ್ತು ರಿಯಾಲಿಟಿ ಟಿವಿ ಸ್ಟಾರ್ ಆಗಿರುವ ಡೊನಾಲ್ಡ್​ ಟ್ರಂಪ್ ಅವರು ಅಚ್ಚರಿಯ ರೀತಿಯಲ್ಲಿ ಗೆಲುವು ಸಾಧಿಸಿದ್ದರು. ರಿಪಬ್ಲಿಕನ್ ಡೊನಾಲ್ಡ್ ಟ್ರಂಪ್ ಈಗಲೂ ಕೂಡಾ ತನ್ನ ಅನುಯಾಯಿಗಳಲ್ಲಿ ಅಪಾರ ಜನಪ್ರಿಯತೆಯನ್ನು ಹೊಂದಿದ್ದಾರೆ. ಆದರೆ, 2020ರ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್ ಸೋಲು ಕಂಡಿದ್ದರು. ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದಾರೆ ಟ್ರಂಪ್. 2024ರ ಅಧ್ಯಕ್ಷೀಯ ಚುನಾವಣೆಗೆ US ಫೆಡರಲ್ ಚುನಾವಣಾ ಆಯೋಗಕ್ಕೆ ಟ್ರಂಪ್ ಸಹಾಯಕರು ದಾಖಲೆಗಳನ್ನು ಸಲ್ಲಿಸಿದ್ದಾರೆ. ರಿಪಬ್ಲಿಕನ್ ಪಕ್ಷದಿಂದ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ ಮೊದಲ ಪ್ರಮುಖ ಸ್ಪರ್ಧಿ ಟ್ರಂಪ್ ಆಗಿದ್ದಾರೆ.

suddiyaana