ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ – ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ – ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಕೋರ್ಟ್ ಶಾಕ್ ಎದುರಾಗಿದೆ. ಜೈಲಿನ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಜೈಲಿನಲ್ಲಿದ್ದಾಗ ಮೊಬೈಲ್ ಫೋನ್ ಬಳಕೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಅವರನ್ನು ತಮ್ಮ ವಶಕ್ಕೆ ಪಡೆಯಲು ಕೋರ್ಟ್ ಅನುಮತಿ ಕೋರಿದ್ದರು.

ಇದನ್ನೂಓದಿ:  ದೆಹಲಿ ಪಿಜಿ ದುರಂತದ ಬಗ್ಗೆ ಸಿಡಿದೆದ್ದ ಕಾಕ್ರೋಚ್ ಪಾರ್ಟಿ – ಮೃತರ ಕುಟುಂಬಗಳಿಗೆ ₹1 ಕೋಟಿ ಪರಿಹಾರಕ್ಕೆ ಆಗ್ರಹ

ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಹೀಗಾಗಿ ಮಾಜಿ ಸಂಸದರಿಗೆ ಇದೀಗ ಎರಡು ದಿನಗಳ ಕಾಲ ಪೊಲೀಸ್ ವಿಚಾರಣೆ ಎದುರಾಗಲಿದೆ.

ಪೊಲೀಸ್ ಕಸ್ಟಡಿಯಲ್ಲಿ ಮೊಬೈಲ್ ಫೋನ್ ಜೈಲಿನೊಳಗೆ ಹೇಗೆ ಬಂತು? ಅದನ್ನು ಯಾರು ಬಳಸುತ್ತಿದ್ದರು? ಮೊಬೈಲ್ ಮೂಲಕ ಯಾರೊಂದಿಗೆ ಸಂಪರ್ಕ ಸಾಧಿಸಲಾಗಿತ್ತು? ಎಂಬ ಹಲವು ಪ್ರಶ್ನೆಗಳ ಬಗ್ಗೆ ತನಿಖೆ ನಡೆಯುವ ಸಾಧ್ಯತೆಯಿದೆ.

ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿನ ಮೊಬೈಲ್ ಪ್ರಕರಣ ಮತ್ತೊಂದು ಕಾನೂನು ಸಂಕಷ್ಟ ತಂದಿದೆ. ಎರಡು ದಿನಗಳ ಪೊಲೀಸ್ ಕಸ್ಟಡಿ ಮುಗಿದ ಬಳಿಕ ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

ಈ ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ, ಪೊಲೀಸ್ ವಿಚಾರಣೆಯಲ್ಲಿ ಯಾವ ಮಾಹಿತಿ ಹೊರಬರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Kishor KV

Leave a Reply

Your email address will not be published. Required fields are marked *