5ನೇ ಟೆಸ್ಟ್‌ನಲ್ಲಿ ರಜತ್ ಪಾಟಿದಾರ್‌ಗೆ ಮತ್ತೊಂದು ಅವಕಾಶ – ಕನ್ನಡಿಗ ದೇವದತ್ ಪಡಿಕ್ಕಲ್ ಡೆಬ್ಯೂ ಡೌಟ್?

5ನೇ ಟೆಸ್ಟ್‌ನಲ್ಲಿ ರಜತ್ ಪಾಟಿದಾರ್‌ಗೆ ಮತ್ತೊಂದು ಅವಕಾಶ – ಕನ್ನಡಿಗ ದೇವದತ್ ಪಡಿಕ್ಕಲ್ ಡೆಬ್ಯೂ ಡೌಟ್?

ಭಾರತ ಮತ್ತು ಇಂಗ್ಲೆಂಡ್ ವಿರುದ್ಧ ಫೆಬ್ರವರಿ 7ರಿಂದ ಐದನೇ ಮತ್ತು ಅಂತಿಮ ಟೆಸ್ಟ್‌ ಪಂದ್ಯ ನಡೆಯಲಿದೆ. ಹೇಗೋ ಕನ್ನಡಿಗ ಕೆ.ಎಲ್ ರಾಹುಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಮತ್ತೊಬ್ಬ ಕನ್ನಡಿಗ ದೇವದತ್ ಪಡಿಕ್ಕಲ್ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿದ್ದಾರೆ ಎಂದೇ ಹೇಳಲಾಗ್ತಿತ್ತು. ಆದರೆ, ರಜತ್ ಪಾಟಿದಾರ್ ಟೀಮ್ ಇಂಡಿಯಾದಲ್ಲಿ ಆಡೋದು ಪಕ್ಕಾ ಆಗಿದೆ. ಹೀಗಾಗಿ ದೇವದತ್ ಪಡಿಕ್ಕಲ್ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡುತ್ತಾರೋ ಇಲ್ಲವೋ ಅನ್ನೋ ಅನುಮಾನ ಮೂಡಿದೆ.

ಇದನ್ನೂ ಓದಿ: ಐದನೇ ಟೆಸ್ಟ್‌ನಲ್ಲಿ ದೇವದತ್ ಪಡಿಕ್ಕಲ್ ಡೆಬ್ಯೂ ಸಾಧ್ಯತೆ – ಕನ್ನಡಿಗನಿಗೆ ಟೀಮ್ ಇಂಡಿಯಾ ಡೋರ್ ಓಪನ್..!

ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಅವರಿಗೆ ಮತ್ತೊಂದು ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಧರ್ಮಶಾಲಾದಲ್ಲಿ 5ನೇ  ಟೆಸ್ಟ್ ಪಂದ್ಯದಲ್ಲಿ ರಜತ್ ಪಾಟಿದಾರ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಐದನೇ ಟೆಸ್ಟ್ ಪಂದ್ಯ ಮಾರ್ಚ್ 7 ರಿಂದ ಶುರುವಾಗಲಿದೆ. ಈ ಹಿಂದೆ ಪಾಟಿದಾರ್ ಜಾಗದಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಪಾಟಿದಾರ್‌ಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಇದರ ಮಧ್ಯೆ ದೇವದತ್ ಪಡಿಕ್ಕಲ್ ಕೂಡ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸುಕೊಳ್ಳುವ ಸಾಧ್ಯತೆ ಇದೆ.

ಐದನೇ ಟೆಸ್ಟ್ನಲ್ಲಿ ಸತತವಾಗಿ ಕ್ರಿಕೆಟ್ ಆಡುತ್ತಿರುವ ಶುಭ್ಮನ್ ಗಿಲ್ ಅವರಿಗೆ ವಿಶ್ರಾಂತಿ ನೀಡಿ ಅವರ ಜಾಗಕ್ಕೆ ದೇವದತ್ ಪಡಿಕ್ಕಲ್ ಅವರನ್ನು ಕರೆತಂದರೆ ಆಶ್ಚರ್ಯ ಪಡಬೇಕಿಲ್ಲ. ಇದರ ನಡುವೆ ಪಾಟಿದಾರ್‌ಗೆ ಅವಕಾಶ ನೀಡುತ್ತಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಪಾಟಿದಾರ್ ಅವರು ಈ ಸರಣಿಯ ಮೂರು ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆರು ಇನ್ನಿಂಗ್ಸ್ಗಳಲ್ಲಿ ಎರಡು ಡಕ್‌ಗಳೊಂದಿಗೆ 32 ರನ್ ಗಳಿಸಿದ್ದಾರಷ್ಟೆ. ಪಾಟಿದಾರ್‌ಗೆ  ಇನ್ನೂ ಒಂದು ಅವಕಾಶವನ್ನು ನೀಡಲು ಮ್ಯಾನೇಜ್ಮೆಂಟ್ ಬಯಸುತ್ತಿದೆ.

Sulekha