ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಂದು ಗ್ಯಾರಂಟಿ! – ಆಟೋ ಚಾಲಕರಿಗೆ ವಾರ್ಷಿಕ 12 ಸಾವಿರ ರೂ.!

ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಂದು ಗ್ಯಾರಂಟಿ! – ಆಟೋ ಚಾಲಕರಿಗೆ ವಾರ್ಷಿಕ 12 ಸಾವಿರ ರೂ.!

ಕಾಂಗ್ರೆಸ್‌ ಸರ್ಕಾರ ಆಟೋ ಚಾಲಕರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಆರ್​ಟಿಸಿ ಬಸ್ ಪ್ರಯಾಣ ಜಾರಿಯಿಂದ ತೀವ್ರ ತೊಂದರೆ ಅನುಭವಿಸುತ್ತಿರುವ ಆಟೊ ಚಾಲಕರಿಗೆ ಧೈರ್ಯ ತುಂಬುವ ಕೆಲಸಕ್ಕೆ ಮುಂದಾಗಿದೆ. ಇದೀಗ ಆಟೋ ಚಾಲಕರಿಗೆ ವರ್ಷಕ್ಕೆ 12 ಸಾವಿರ ರೂಪಾಯಿ ನೀಡಲು ಮುಂದಾಗಿದೆ.

ಹೌದು, ಕಾಂಗ್ರೆಸ್‌ ಸರ್ಕಾರ ಸದಾ ಗ್ಯಾರಂಟಿಗಳಿಂದಲೇ ಗಮನಸೆಳೆಯುತ್ತಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ (ಮಹಾಲಕ್ಷ್ಮಿ ಯೋಜನೆ) ಯೋಜನೆ ಜಾರಿಗೊಳಿಸಿದ ಬಳಿಕ ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದೀಗ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ನೆರವು ನೀಡುವುದಾಗಿ ತೆಲಂಗಾಣದ ಕಾಂಗ್ರೆಸ್‌ ಭರವಸೆ ನೀಡಿದೆ.

ಇದನ್ನೂ ಓದಿ: ಗಗನಕ್ಕೇರುತ್ತಿದೆ ಬೆಳ್ಳುಳ್ಳಿ ಬೆಲೆ! – ಕೆ.ಜಿ ಬೆಳ್ಳುಳ್ಳಿಗೆ 500ರ ಗಡಿದಾಟಿದ ದರ!

ತೆಲಂಗಾಣ ಸರ್ಕಾರ ರಾಜ್ಯದ ಆಟೋ ಚಾಲಕರಿಗೆ ವರ್ಷಕ್ಕೆ 12 ಸಾವಿರ ರೂ.ನಂತೆ ಆರ್ಥಿಕ ನೆರವು ನೀಡಲಾಗುವುದು ಎಂದು ಸಚಿವ  ಶ್ರೀಧರ್ ಬಾಬು ತಿಳಿಸಿದ್ದಾರೆ. ಬರುವ ಬಜೆಟ್‌ನಲ್ಲಿ ಆಟೋ ಚಾಲಕರಿಗೆ ವರ್ಷಕ್ಕೆ 12 ಸಾವಿರ ಧನಸಹಾಯವನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ತೆಲಂಗಾಣ ವಿಧಾನಸಭೆಯಲ್ಲಿ ವಿರೋಧ ಪಕ್ಷವು ಆಟೋ ಚಾಲಕರ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಬಿಆರ್​ಎಸ್​ ಶಾಸಕ ಪಲ್ಲಾ ರಾಜೇಶ್ವರ್ ರೆಡ್ಡಿ ಕೇಳಿದ ಪ್ರಶ್ನೆಗೆ ಸಚಿವ ಶ್ರೀಧರ್ ಬಾಬು ಉತ್ತರಿಸಿ, ಈಗಾಗಲೇ ಮಹಾಲಕ್ಷ್ಮಿ ಯೋಜನೆ ಜಾರಿಯಿಂದ ಆಟೋ ಚಾಲಕರಿಗೆ ಸಣ್ಣಪುಟ್ಟ ಸಮಸ್ಯೆ ಎದುರಾಗಲಿದೆ ಎಂದು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯದಿಂದ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದಾರೆ ಎಂಬ ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಸಚಿವ ದಿಡ್ಡಿಲ್ಲಾ ಶ್ರೀಧರ್ ಬಾಬು ವಿಧಾನಸಭಾ ವೇದಿಕೆಯಲ್ಲಿ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಆಟೋ ಚಾಲಕರ ಕಲ್ಯಾಣಕ್ಕೆ ಕಾಂಗ್ರೆಸ್ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

Shwetha M