‘ಕಾಂತಾರ 2’ ಚಿತ್ರದ ಕುರಿತು ಮತ್ತೊಂದು ಮೆಗಾ ಅಪ್ ಡೇಟ್! – 7 ಭಾಷೆಗಳಲ್ಲಿ ಸಿನಿಮಾ ರಿಲೀಸ್‌ಗೆ ಪ್ಲಾನ್‌!

‘ಕಾಂತಾರ 2’ ಚಿತ್ರದ ಕುರಿತು ಮತ್ತೊಂದು ಮೆಗಾ ಅಪ್ ಡೇಟ್! – 7 ಭಾಷೆಗಳಲ್ಲಿ ಸಿನಿಮಾ ರಿಲೀಸ್‌ಗೆ ಪ್ಲಾನ್‌!

ಕನ್ನಡ ಸಿನಿಮಾ ರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿ ದೇಶ ವಿದೇಶಗಳಲ್ಲಿ ಜನಮನ್ನಣೆ ಪಡೆದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಸಿನೆಮಾದ ಬಗ್ಗೆ ನಿಮಗೆಲ್ಲ ಗೊತ್ತೇ ಇದೆ. ಹೊಂಬಾಳೆ ಫಿಲ್ಸ್ 17 ಕೋಟಿಯಲ್ಲಿ ತಯಾರಾದ ‘ಕಾಂತಾರ’ ವಿಶ್ವದಾದ್ಯಂತ ಬರೋಬ್ಬರಿ 400 ಕೋಟಿ ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿ ಇತಿಹಾಸ ಸೃಷ್ಟಿಸಿತ್ತು. ಇದೀಗ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ಮೇಕಿಂಗ್‌ ಬ್ಯೂಸಿಯಾಗಿದ್ದಾರೆ. ಕಾಂತಾರ 2 ಚಿತ್ರದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಲೇ ಇದೆ. ಮೊದ ಮೊದಲು ಈ ಸಿನಿಮಾ ಕನ್ನಡದಲ್ಲಿ ಮಾತ್ರ ತೆರೆಗೆ ಬರಲಿದೆ ಅಂತಾ ಹೇಳಲಾಗುತ್ತಿತ್ತು. ಆದರೆ ಈ ಸಿನಿಮಾ 7 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಅಂತಾ ಹೇಳಾಗುತ್ತಿದೆ.

ಹೌದು, ಮೊನ್ನೆಯಷ್ಟೇ ಸಿನಿಮಾ ಮಹೂರ್ತದ ಕುರಿತಂತೆ ಪಂಜುರ್ಲಿ ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಅಷ್ಟೇ ಅಲ್ಲದೇ ಈ ಸಿನಿಮಾ 7 ಭಾಷೆಗಳಲ್ಲಿ ತೆರೆಕಾಣಲಿದೆ ಅಂತಾ ಹೇಳಲಾಗುತ್ತಿದೆ. ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸಿನಿಮಾ ಟೀಮ್ ಅಧಿಕೃತವಾಗಿ ಯಾವುದೇ ಮಾಹಿತಿ ಬಿಟ್ಟುಕೊಡದಿದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ.

ಇದನ್ನೂ ಓದಿ: ಕಾರ್ತಿಕ್‌ ಜೊತೆ ರಂಪಾಟ – ಬಿಗ್‌ಬಾಸ್‌ ಮನೆಯಿಂದ ಸಂಗೀತ ಔಟ್?

‘ಕಾಂತಾರ‘ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ‘ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2′ ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಸರಳವಾಗಿ ಜರುಗಲಿದೆ.

ಕಾಂತಾರ ಸೂಪರ್ ಡೂಪರ್ ಹಿಟ್ ಆದಂತೆಯೇ ‘ಕಾಂತಾರ 2′ ಅದಕ್ಕಿಂತ ಹೆಚ್ಚಿನ ಯಶಸ್ಸು ಪಡೆದು ಗೆದ್ದು ಬೀಗಲೇಬೇಕೆಂದು ರಿಷಬ್ ಶೆಟ್ಟಿ  ಕೂಡ ತೆರೆಮರೆಯಲ್ಲಿ ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಕಾಲಿಡುತ್ತಿದ್ದಾರೆ.

ಅದಕ್ಕಾಗಿ ತಮ್ಮ ಲುಕ್ ಕೂಡ ಜೇಂಜ್ ಮಾಡಿ, ಸಿನಿಮಾ ಕಥೆಯಲ್ಲಿ ಸಾಕಷ್ಟು ಕೆಲಸ ಮಾಡಿಯೇ ಕಾಂತಾರ 2ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿನಿಮಾ ಮುಹೂರ್ತ ಸಮಾರಂಭದ ದಿನ ಸಿಗಲಿದೆ.

Shwetha M