‘ಜವಾನ್’ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ – ಬೋಳುತಲೆಯಲ್ಲಿ ಕಾಣಿಸಿಕೊಂಡ ಶಾರುಖ್‌ಖಾನ್..!..!

‘ಜವಾನ್’ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ – ಬೋಳುತಲೆಯಲ್ಲಿ ಕಾಣಿಸಿಕೊಂಡ ಶಾರುಖ್‌ಖಾನ್..!..!

ಬಾಲಿವುಡ್‌ನ ಕಿಂಗ್‌ಖಾನ್ ‘ಪಠಾಣ್’ ಹೀರೋ ಶಾರುಖ್‌ಖಾನ್ ಜವಾನ್ ಸಿನಿಮಾ ರಿಲೀಸ್‌ಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಜವಾನ್ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದ್ದು, ಶಾರುಖ್ ಖಾನ್ ಅಭಿಮಾನಿಗಳು ಪೋಸ್ಟರ್ ಗೆ ಫಿದಾ ಆಗಿದ್ದಾರೆ. ಬೋಳು ತಲೆಯ ಶಾರುಖ್ ಖಾನ್ ಕೈಯಲ್ಲಿ ಗನ್ ಹಿಡಿದುಕೊಂಡು ಪೋಸ್ ನೀಡಿರುವ ಪೋಸ್ಟರ್ ನೋಡಿ ಫ್ಯಾನ್ಸ್ ಬಾಲಿವುಡ್ ಕಿಂಗ್‌ಖಾನ್‌ಗೆ ಜೈ ಹೋ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಓಂ ಸ್ಟೈಲ್​ನಲ್ಲೇ ಫ್ಯಾನ್ಸ್‌ಗೆ ಸರ್ಪ್ರೈಸ್‌ ನೀಡಿದ ಶಿವಣ್ಣ – ಘೋಸ್ಟ್‌ ಟೀಸರ್​ ಗೆ ಜೈ ಎಂದ ಫ್ಯಾನ್ಸ್‌

ಜವಾನ್ ಸಿನಿಮಾದ ಪೋಸ್ಟರ್ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲೇ ಸೋಷಿಯಲ್ ಮೀಡಿಯಾ ತುಂಬಾ ವೈರಲ್ ಆಗಿದೆ. ಇಂಗ್ಲಿಷ್, ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಶಾರುಖ್ ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ‘ಜವಾನ್’ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸಮಾಜದಲ್ಲಾಗುತ್ತಿರುವ ತಪ್ಪುಗಳನ್ನು ತಿದ್ದುವ ಒಬ್ಬ ಜವಾಬ್ದಾರಿಯುತ ಮತ್ತು ಪ್ರಾಮಾಣಿಕ ವ್ಯಕ್ತಿಯ ಕಥೆಯಾಗಿದೆ. ದೊಡ್ಡ ಬಜೆಟ್ ನಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ ಈ ಚಿತ್ರವು ಆಕ್ಷನ್ ಮತ್ತು ಎಮೋಷನ್ ಗಳನ್ನು ಹದವಾಗಿ ಹಿಡಿದಿಟ್ಟಿದೆ. ರೋಮಾಂಚನಗೊಳಿಸುವ ಆಕ್ಷನ್ ದೃಶ್ಯಗಳು, ಅದ್ದೂರಿ ಹಾಡುಗಳು ಈ ಚಿತ್ರದಲ್ಲಿದೆ. ದಕ್ಷಿಣ ಭಾರತದ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕರಾದ ಅಟ್ಲಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಅನಿರುದ್ಧ್ ರವಿಚಂದರ್ ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವಿದೆ. ಈ ಚಿತ್ರದಲ್ಲಿ ಶಾರುಖ್ ಜೊತೆಗೆ ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ವಿವಿಧ ಭಾಷೆಯ ನಟ-ನಟಿಯರು ಕಾಣಿಸಿಕೊಂಡಿದ್ದಾರೆ. ನಯನತಾರಾ, ವಿಜಯ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಗಿರಿಜಾ ಓಕ್, ಸಂಗೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ದೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಿಯಾ ನಟಿಸಿರುವ ಈ ಚಿತ್ರವು ಎಲ್ಲ ಭಾಷೆಗಳ ಜನರಿಗೂ ತಲುಪವಂತೆ ಚಿತ್ರಿಸಲಾಗಿದೆ. ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ‘ಜವಾನ್’ ಚಿತ್ರವು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

suddiyaana