ವನ್ಯಜೀವಿಗಳ ಅಂಗಾಂಗ ಸರ್ಕಾರಕ್ಕೆ ಹಿಂದಿರುಗಿಸಲು ಏಪ್ರಿಲ್ 10 ಕೊನೆ ದಿನ!
ವನ್ಯಜೀವಿಗಳ ಹಲ್ಲು, ಉಗುರು, ಅಂಗಾಂಗಗಳು, ಚರ್ಮ ಹಾಗೂ ಕೊಂಬುಗಳನ್ನು ಇಟ್ಟುಕೊಂಡವರಿಗೆ ಸರ್ಕಾರ ಮಹತ್ವದ ಸುದ್ದಿಯೊಂದನ್ನು ಕೊಟ್ಟಿದೆ. ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ ಅಂಗಾಂಗಗಳನ್ನು ಇಟ್ಟು ಕೊಂಡಿರುವರು ಅವುಗಳನ್ನು ಸರ್ಕಾರಕ್ಕೆ ಹಿಂದಿರುಗಿಸಲು ಸರ್ಕಾರ ಡೆಡ್‌ಲೈನ್ ಘೋಷಿಸಿದೆ.
ಇದನ್ನೂ ಓದಿ: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ – ಲಾಹೋರ್‌ನಲ್ಲಿ 55 ಸಾವಿರ ಮತಗಳಿಂದ ನವಾಜ್ ಷರೀಫ್ ಭರ್ಜರಿ ಗೆಲುವು
ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಹುಲಿ, ಚಿರತೆ ಮತ್ತು ಆನೆಗಳ ಕೊಂಬು, ಹಲ್ಲು, ಕೂದಲು ಸೇರಿದಂತೆ ಎಲ್ಲಾ ವನ್ಯಜೀವಿ ಅಂಗಾಂಗಗಳನ್ನು ಹಿಂತಿರುಗಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ. ಏಪ್ರಿಲ್ 10ರ ಒಳಗೆ ವನ್ಯಜೀವಿಗಳ ಅಂಗಗಳನ್ನು ಹಿಂತಿರುಗಿಸಬೇಕು ಅಂತಾ ಹೇಳಿದ್ದಾರೆ.
ಪ್ರಮಾಣ ಪತ್ರ ಇಲ್ಲದೆ ಅಕ್ರಮವಾಗಿ ವನ್ಯಜೀವಿ ಅಂಗಾಂಗಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. 1973 ಹಾಗೂ 2003 ರಲ್ಲಿ ವನ್ಯಜೀವಿ ಅಂಗಾಂಗಗಳ ವಾಪಸ್‌ಗೆ ಅವಕಾಶ ನೀಡಲಾಗಿತ್ತು. ಆದರೆ ಇನ್ನೂ ವಾಪಸ್ ಮಾಡದೇ ಇರುವುದು ದೊಡ್ಡ ಅಪರಾಧ. ಮೌಢ್ಯತೆ ಹಾಗೂ ನಂಬಿಕೆಗಾಗಿ ಕೆಲವು ಮುಗ್ದ ಜನರು ಇನ್ನೂ ಇಟ್ಟುಕೊಂಡಿದ್ದಾರೆ.
ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಸರ್ಕಾರ ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ. ಜನರು ತಮ್ಮ ಬಳಿ ಇರುವ ಅಂಗಾಗಳನ್ನು ಸಮೀಪದಲ್ಲಿರುವ ಅರಣ್ಯ ಕಚೇರಿಗೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿ ಗಡುವು ನೀಡಿದ್ದಾರೆ.