ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ – ಪ್ರಧಾನಿ ಮೋದಿ

ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ – ಪ್ರಧಾನಿ ಮೋದಿ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ 28 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಹಾಗೂ ಜೆಡಿಎಸ್‌ ಪಣತೊಟ್ಟಿದೆ. ಮೊನ್ನೆ ಮೊನ್ನೆಯಷ್ಟೇ ಮೈಸೂರು, ಕರಾವಳಿಯಲ್ಲಿ ಕಮಲ ಕಹಳೆ ಮೊಳಗಿಸಿದ್ದ ಪ್ರಧಾನಿ ಮೋದಿ ಇವತ್ತು ಮತ್ತೆ ಕರುನಾಡಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳ ಅಭ್ಯರ್ಥಿಗಳ ಪರ ಬಹಿರಂಗ ಸಭೆಯಲ್ಲಿ ಪ್ರಧಾನಿ ಮತಯಾಚನೆ ಮಾಡಿದ್ರು..

ಇದನ್ನೂ ಓದಿ: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ – ‘ಖಜಾನೆ ಖಾಲಿ, ಚೊಂಬು ಹಿಡಿದು ನಿಂತಿದ್ದಾರೆ ಎಂದು ಹೆಚ್‌ಡಿಕೆ ವ್ಯಂಗ್ಯ!

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಮಾವೇಶದಲ್ಲಿ ಮಾತನಾಡಿದ ಅವರು,  ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕಿಸಾನ್ ಸಮ್ಮಾನ್‌  ಹಣದ ಜತೆಗೆ 2,000 ರೂ. ಸೇರಿಸಿ 4,000 ರೂಪಾಯಿಯನ್ನು ರೈತರಿಗೆ ನೀಡಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಅದನ್ನು ಸ್ಥಗಿತಗೊಳಿಸಲಾಯಿತು. ಇದರಿಂದಲೇ ಕಾಂಗ್ರೆಸ್ ರೈತ ವಿರೋಧಿ ಎಂಬುದು ಗೊತ್ತಾಗುತ್ತದೆ. ರೈತ ವಿರೋಧಿ ಕಾಂಗ್ರೆಸ್​​ಗೆ ಇಲ್ಲಿನ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಾಗಿ ಭಾವಿಸುತ್ತೇನೆ ಎಂದು ಪ್ರಧಾನಿ ಮೋದಿ   ಹೇಳಿದರು.

ವಿಕಸಿತ ಭಾರತಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿ. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಎನ್‌ಡಿಎ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಉಜ್ವಲ ಭವಿಷ್ಯಕ್ಕಾಗಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದು, ಬಿಜೆಪಿ ಶಕ್ತಿ ಪ್ರದರ್ಶನ ಮಾಡಿದೆ. ಇನ್ನು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಸಮಾವೇಶದ ಬಳಿಕ ಬೆಂಗಳೂರಿಗೆ ಆಗಮಿಸಿದ್ದಾರೆ. ಅರಮನೆ ಮೈದಾನದಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ.

Shwetha M