ಅಂಬಿ ಮಗನ ಅರಿಶಿನ ಶಾಸ್ತ್ರ – ಅಭಿಷೇಕ್ ಮದುವೆ ಸಮಾರಂಭಕ್ಕೆ ಸಕಲ ಸಿದ್ಧತೆ

ಅಂಬಿ ಮಗನ ಅರಿಶಿನ ಶಾಸ್ತ್ರ – ಅಭಿಷೇಕ್ ಮದುವೆ ಸಮಾರಂಭಕ್ಕೆ ಸಕಲ ಸಿದ್ಧತೆ

ರೆಬೆಲ್ ಸ್ಟಾರ್ ಅಂಬರೀಶ್ ಮಗನ ಮದುವೆಯ ಶಾಸ್ತ್ರಗಳು ಆರಂಭವಾಗಿದೆ. ಅಂಬಿ ಮನೆಯಲ್ಲಿ ಅಭಿಷೇಕ್ ಮದುವೆ ತಯಾರಿ ಜೋರಾಗಿಯೇ ಸಾಗುತ್ತಿದೆ. ಶುಕ್ರವಾರ ಅರಿಶಿನ ಶಾಸ್ತ್ರ ನೆರವೇರಿದೆ.  ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿರುವ ನಟ ಅಭಿಷೇಕ್ ಫೋಟೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಬಿಳಿ ಬಣ್ಣದ ಬಟ್ಟೆ ತೊಟ್ಟಿರುವ ಅಭಿಷೇಕ್ ಅರಿಶಿನ ಶಾಸ್ತ್ರದಲ್ಲಿ ಸಂತಸದಿಂದ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ಒಪ್ಪಿದ ಸರ್ಕಾರ – ಕಾರಣ ಏನು ಗೊತ್ತಾ..?

ಜೂನ್ 5ರಂದು ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಆರತಕ್ಷತೆ ಸಮಾರಂಭ ನಡೆಯಲಿದೆ. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಜರುಗಲಿದೆ. ಸಿನಿಮಾ- ರಾಜಕೀಯ  ಎರಡೂ ಕ್ಷೇತ್ರದ ಗಣ್ಯರು ಅಭಿಷೇಕ್- ಅವಿವಾ ಆರತಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮದುವೆಗೆ ಆಪ್ತ ಬಳಗದವರಿಗಷ್ಟೇ ಆಹ್ವಾನ ನೀಡಲಾಗಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.

2022ರ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬದವರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು. ಅಭಿಷೇಕ್ ಅಂಬರೀಶ್- ಅವಿವಾ ಬಿದ್ದಪ್ಪ ಜೋಡಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದೀಗ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ.

suddiyaana