ಸಿಎಂಗೆ ಮತ್ತೆ ಕಾನೂನು ಸಂಕಷ್ಟ – ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿದೆ ಪರಿಣಮಿಸಿದೆ. ಕಾನೂನು ಸಂಕಷ್ಟಕ್ಕೆ ಒಳಗಾಗುವಂತೆ ಆಗಿದೆ. ಈ ಹಗರಣದ ತನಿಖೆಯನ್ನು ಈಗಾಗಲೇ ಮೈಸೂರು ಲೋಕಾಯುಕ್ತ ನಡೆಸುತ್ತಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಇದನ್ನೂ ಓದಿ: ನಟ ಸಲ್ಮಾನ್ ಖಾನ್ ಟಾರ್ಗೆಟ್ – ಜಸ್ಟ್ ಮಿಸ್.. ಸಲ್ಮಾನ್‌ಗೆ ಹೈ ಸೆಕ್ಯೂರಿಟಿ
ಮುಡಾ ಕೇಸ್ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಅರ್ಕಾವತಿ ಲೇಔಟ್ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ ರಾಜಶೇಖರ್ ಎಂಬುವರು ಸಿಎಂ ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳು “ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅರ್ಕಾವತಿ ಲೇಔಟ್ನಲ್ಲಿ ಹಂಚಿಕೆಯಾಗಿದ್ದ ನಿವೇಶನ ಭೂಗಳ್ಳರ ಪಾಲಾಗುತ್ತಿದೆ. ಅಧಿಕಾರ ದುರ್ಬಳಕೆಯಿಂದ ನಿವೇಶನದಾರರಿಗೆ ತೊಂದರೆಯಾಗುತ್ತಿದೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.