ಆಪರೇಷನ್ ಸಿಂಧೂರ 10 ರಂದು ಕೊನೆಗೊಂಡಿಲ್ಲ! – ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

ಆಪರೇಷನ್ ಸಿಂಧೂರ 10 ರಂದು ಕೊನೆಗೊಂಡಿಲ್ಲ! – ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ

ಏಪ್ರಿಲ್ 22ರಂದು ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಶನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು, ಆಪರೇಷನ್ ಸಿಂಧೂರ್‌ನಿಂದ ಉಂಟಾದ ಪಾಕಿಸ್ತಾನದೊಂದಿಗಿನ ಸಂಘರ್ಷವು ಮೇ 10 ರ ಕದನ ವಿರಾಮದೊಂದಿಗೆ ಕೊನೆಗೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್ ನಲ್ಲಿ ಭಾರತ Vs ಪಾಕ್ ಫೈಟ್ ನಡೆದಿಲ್ಲ – ಈ 5 ಪಂದ್ಯಗಳ ಕ್ಲೈಮ್ಯಾಕ್ಸ್ ಸೂಪರ್

ನವದೆಹಲಿಯಲ್ಲಿ ನಡೆದ ಆಪರೇಷನ್ ಸಿಂದೂರ್: ಬಿಫೋರ್ ಆ್ಯಂಡ್ ಬಿಯಾಂಡ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಪಾಕ್‌ ಜೊತೆಗಿನ ಯುದ್ಧ ಮೇ 10 ರಂದು ಕೊನೆಗೊಂಡಿತು ಎಂದು ನೀವು ಭಾವಿಸುತ್ತಿರಬಹುದು. ಇಲ್ಲ, ಅದು ದೀರ್ಘಕಾಲದ ವರೆಗೆ ಮುಂದುವರೆಯಿತು. ಕಾರಣ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿತ್ತು. ಅದನ್ನು ಮೀರಿ ಸಹಜವಾಗಿ ಇಲ್ಲಿ ಮಾಹಿತಿ ಹಂಚಿಕೊಳ್ಳಲು ನನಗೆ ಕಷ್ಟವಾಗುತ್ತದೆ ಎಂದು ಜನರಲ್ ದ್ವಿವೇದಿ ಹೇಳಿದರು.

ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ಇನ್ನೂ ಕೊನೆಗೊಂಡಿಲ್ಲ. ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನಗಳು ಮುಂದುವರಿದಿವೆ. ರಾಜ್ಯ ಪ್ರಾಯೋಜಿತ ಭಯೋತ್ಪಾದನೆ ಕೊನೆಗೊಂಡಿದೆಯೇ? ನಾನು ಹಾಗೆ ಭಾವಿಸುವುದಿಲ್ಲ. ಏಕೆಂದರೆ, ಎಲ್‌ಒಸಿಯಲ್ಲಿ ಒಳನುಸುಳುವಿಕೆ ಪ್ರಯತ್ನಗಳು ಇನ್ನೂ ನಡೆಯುತ್ತಿವೆ. ಎಷ್ಟು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ ಮತ್ತು ಅವರಲ್ಲಿ ಎಷ್ಟು ಮಂದಿ ತಪ್ಪಿಸಿಕೊಂಡಿದ್ದಾರೆ ಎಂಬುದು ನಮಗೆಲ್ಲರಿಗೂ ತಿಳಿದಿದೆ ಎಂದರು.

Shwetha M