ಯೋಧನ ಮೇಲೆ ಟೋಲ್ ಸಿಬ್ಬಂದಿಯಿಂದ ಹ*ಲ್ಲೆ – ಕೈ ಕಾಲು ಕಟ್ಟಿ ಡೆಡ್ಲಿ ಅಟ್ಯಾಕ್

ಸೈನಿಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಸೈನಿಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ನಾಲ್ಕು ಮಂದಿ ಟೋಲ್ ಬೂತ್ ಸಿಬ್ಬಂದಿಯನ್ನ ಅರೆಸ್ಟ್ ಮಾಡಲಾಗಿದೆ. ಕಪಿಲ್ ಕವದ್ ಎಂಬ ಸೈನಿಕ ಭಾರತೀಯ ಸೇನೆಯ ರಜಪೂತ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ರಜೆಯ ನಿಮಿತ್ತ ತಮ್ಮ ಮನೆಗೆ ಬಂದಿದ್ದರು. ಮತ್ತೆ ಕರ್ತವ್ಯಕ್ಕೆ ಹಿಂತಿರುಗಲು ದೆಹಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಪಿಲ್ ಮತ್ತು ಅವರ ಸೋದರಸಂಬಂಧಿ ಜನದಟ್ಟಣೆಯ ಭುನಿ ಟೋಲ್ ಬೂತ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಇದರಿಂದ ವಿಮಾನಕ್ಕೆ ತಡವಾಗುತ್ತದೆ ಎಂದು ಆತಂಕಕೊಂಡ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ಪ್ರಾರಂಭಿಸಿದರು.
ಈ ವೇಳೆ ಮಾತಿನ ಚಕಮಕಿ ನಡೆದಿದ್ದು, ಐದು ಮಂದಿ ಟೋಲ್ ಬೂತ್ ಸಿಬ್ಬಂದಿಗಳು ಕಪಿಲ್ ಮತ್ತು ಅವರ ಸೋದರ ಸಂಬಂಧಿಯನ್ನು ಥಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಹಲ್ಲೆಯ ವಿಡಿಯೊದಲ್ಲಿ, ಕಪಿಲ್ ಅವರಿಗೆ ಕೋಲಿನಿಂದ ಹಲ್ಲೆ ಮಾಡಲಾಗಿದೆ. ನಂತರ ಕಪಿಲ್ ಅವರನ್ನು ಕಂಬಕ್ಕೆ ಬಿಗಿದು, ಅವರ ಕೈಗಳನ್ನು ಹಿಂದಕ್ಕೆ ಎಳೆದು ಮನಬಂದಂತೆ ಥಳಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಹಲ್ಲೆ ನಡೆಸಿದ ಟೋಲ್ ಬೂತ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ವಿಡಿಯೊಗಳನ್ನು ಪರಿಶೀಲಿಸಿದ ನಂತರ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇತರ ಆರೋಪಿಗಳನ್ನು ಬಂಧಿಸಲು ಇನ್ನೂ ಎರಡು ತಂಡಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನೋಡಿರಿ

