ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ – ಕೊನೆಗೂ ಮೂವರು ಅರೆಸ್ಟ್

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ – ಕೊನೆಗೂ ಮೂವರು ಅರೆಸ್ಟ್

ವಿಧಾನಸೌಧ ಆವರಣದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದರು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಆದಿತ್ಯ – ಎಲ್‌ 1 ಮಿಷನ್‌ ಉಡಾವಣೆಯಂದೇ ಇಸ್ರೋ ಅಧ್ಯಕ್ಷ ಸೋಮನಾಥ್​ ಗೆ ಕ್ಯಾನ್ಸರ್​ ಪತ್ತೆ!

ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ. ಸದ್ಯ ಈ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ.  ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್‌, ಜಿಂದಾಬಾದ್‌ ಅಂತಾ ಕೂಗುತ್ತಾರೆ.

ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಾ ಇದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Shwetha M