ISI ಏಜೆಂಟರ್‌ಗಳ ಜೊತೆ ಜ್ಯೋತಿ ಮಲ್ಹೋತ್ರಾ ಸಂಪರ್ಕ – ಪದೇ ಪದೇ ಪಾಕ್‌ಗೆ ಹೋಗುತ್ತಿದ್ದ ಯುಟ್ಯೂಬರ್

ಬೇಹುಗಾರಿಕೆ ಆರೋಪದಲ್ಲಿ ಬಂಧಿಸಲಾಗಿರುವ ಹರಿಯಾಣ ಮೂಲದ ಯು ಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕ್ ನ ಪ್ರಮುಖ ಸಂಪನ್ಮೂಲವನ್ನಾಗಿ ಪರಿಗಣಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತ-ಪಾಕ್ ಸೇನಾ ಸಂಘರ್ಷದ ಸಮಯದಲ್ಲಿ ಜ್ಯೋತಿ ಅವರು ಪಾಕ್ ಏಜೆಂಟ್‌ಗಳೊಂದಿಗೆ ಸಂಪರ್ಕದಲ್ಲಿದ್ದರು. ಆದರೆ ಸೇನೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅವರಿಗೆ ಸಿಕ್ಕಿರಲಿಲ್ಲ. ಜ್ಯೋತಿ ಅವರು ಪ್ರಾಯೋಜಿತ ಪ್ರವಾಸಗಳಲ್ಲಿ ಪಾಕಿಸ್ತಾನಕ್ಕೆ ಹಲವು ಬಾರಿ ಭೇಟಿ ನೀಡಿದ್ದರು ಮತ್ತು ಪಹಲ್ಗಾಮ್ ದಾಳಿಗೂ ಮುನ್ನ ಆ ದೇಶಕ್ಕೆ ಭೇಟಿ ನೀಡಿದ್ದರು ಎಂದು ಹಿಸಾರ್ ಪೊಲೀಸ್ ವರಿಷ್ಠಾಧಿಕಾರಿ ಶಶಾಂಕ್ ಕುಮಾರ್ ಸಾವನ್ ತಿಳಿಸಿದ್ದಾರೆ.
ಆಧುನಿಕ ಯುದ್ಧವು ಗಡಿಯಲ್ಲಿನ ಹೋರಾಟ ಮಾತ್ರವಲ್ಲ, ಪಾಕಿಸ್ತಾನದ ಏಜೆಂಟ್‌ಗಳು ಸಾಮಾಜಿಕ ಮಾಧ್ಯಮದ ಪ್ರಭಾವಿಗಳನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಜ್ಯೋತಿ ಮಲ್ಹೋತ್ರಾ ಒಮ್ಮೆ ಚೀನಾಕ್ಕೆ ಭೇಟಿ ನೀಡಿದ್ದರು. ಅವರ ಪ್ರಯಾಣದ ವೆಚ್ಚವು ಅವರ ಘೋಷಿತ ಆದಾಯಕ್ಕಿಂತ ಹೆಚ್ಚಾಗಿದೆ. ಆಕೆಯ ಹಣಕಾಸಿನ ವಿವರಗಳನ್ನು ವಿಶ್ಲೇಷಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.