ಯಾವುದೇ ಸಮಯದಲ್ಲಾದರೂ ಜಮ್ಮುಕಾಶ್ಮೀರದಲ್ಲಿ ಚುನಾವಣೆ ನಡೆಸಬಹುದು – ಕೇಂದ್ರ ಸರ್ಕಾರ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಾದರೂ ಚುನಾವಣೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ. ಆರ್ಟಿಕಲ್ 370 ತೆಗೆದುಹಾಕಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.
ಆರ್ಟಿಕಲ್ 370 ತೆಗೆದುಹಾಕಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯ ಸುಪ್ರೀಂ ಕೋರ್ಟ್ ಹೇಳಿದೆ. ಮಂಗಳವಾರ ಕೊನೆಯ ಹಂತದ ವಿಚಾರಣೆ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸುವ ಪ್ರಾಮುಖ್ಯತೆಯನ್ನು ಸುಪ್ರೀಂಕೋರ್ಟ್ ಒತ್ತಿ ಹೇಳಿತ್ತು. 2018ರಿಂದ ಕಾಶ್ಮೀರದಲ್ಲಿ ಚುನಾಯಿತ ಸರ್ಕಾರ ಇಲ್ಲದಿರುವುದರಿಂದ ಕೋರ್ಟ್ ಈ ಹೇಳಿಕೆಯನ್ನು ಉಲ್ಲೇಖಿಸಿತು.
ಇದನ್ನೂ ಓದಿ: ಆದಿತ್ಯ L1 ಉಡಾವಣಾ ತಾಲೀಮು ಪೂರ್ಣ – ಆಂತರಿಕ ತಪಾಸಣೆ ಯಶಸ್ವಿ
ಗುರುವಾರ ವಿಚಾರಣೆಯ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವವನ್ನು ಮರುಸ್ಥಾಪಿಸಲು ಕಾಲಮಿತಿಯನ್ನು ನೀಡಲು ಕೇಂದ್ರವು ನಿರಾಕರಿಸಿತು ಮತ್ತು ಚುನಾಯಿತ ಸರ್ಕಾರಕ್ಕಾಗಿ ಯಾವುದೇ ಸಮಯದಲ್ಲಾದರೂ ಚುನಾವಣೆ ನಡೆಬಹುದು. ಆದರೆ ಚುನಾವಣೆ ನಡೆಸುವ ನಿರ್ಧಾರವು ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಸಮಿತಿಯದ್ದಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುತ್ತದೆ ಎಂಬ ಸಾಲಿಸಿಟರ್ ಜನರಲ್ ಹೇಳಿಕೆಗೆ ಲಡಾಖ್‌ನ ನಾಯಕರು ಮತ್ತು ಅರ್ಜಿದಾರರು ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಲಡಾಖ್‌ನಲ್ಲಿ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ.
ಆಗಸ್ಟ್ 2019ರಲ್ಲಿ ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ನಂತರ, ಕೇಂದ್ರವು ಸೂಕ್ತ ಸಮಯದಲ್ಲಿ ರಾಜ್ಯತ್ವವನ್ನು ಮರುಸ್ಥಾಪಿಸುವುದಾಗಿ ಹೇಳಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದನ್ನೇ ಪುನರುಚ್ಚರಿಸಿದ್ದಾರೆ ಆದರೆ, ಅಂತಹ ಕ್ರಮಕ್ಕೆ ಯಾವುದೇ ಗಡುವನ್ನು ಕೇಂದ್ರ ಸರ್ಕಾರ ಈವರೆಗೂ ನಿಗದಿಪಡಿಸಿಲ್ಲ.