ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೆ ಹಿನ್ನೆಡೆ –  ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!

ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೆ ಹಿನ್ನೆಡೆ –  ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!

ದೆಹಲಿ ಮದ್ಯ ಹಗರಣಕ್ಕೆ  ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಅರೆಸ್ಟ್‌ ಮಾಡಿದೆ.  ಜಾರಿ ನಿರ್ದೇಶನಾಲಯ ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ವೇ ಪಾಲಿಟಿಕ್ಸ್!  – ಗುಪ್ತಚರ ವರದಿಯಲ್ಲಿ ಸಿಕ್ಕಿದ್ಯಾ ಕೈ ಗೆ ಅಚ್ಚರಿಯ ಫಲಿತಾಂಶ?

ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪ ಮುಖ್ಯಮಂತ್ರಿಗಳ ಮೇಲಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಹೈಕೋರ್ಟ್​ನಲ್ಲಿ ಕೇಜ್ರಿವಾಲ್ ಪ್ರಶ್ನೆ ಮಾಡಿದ್ದರು. ಇಡಿ ಕಸ್ಟಡಿಗೆ ಒಪ್ಪಿಸಿದ ಟ್ರಯಲ್ ಕೋರ್ಟ್ ತೀರ್ಪನ್ನೂ ಅವರು ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದರು. ಇದರ ವಿಚಾರಣೆ ನಡೆಸಿದ ದೆಹಲಿ ಉಚ್ಚ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರು “ಇತರರೊಂದಿಗೆ ಪಿತೂರಿ ನಡೆಸಿದ್ದಾರೆ” ಮತ್ತು”ಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಜಾರಿ ನಿರ್ದೇಶನಾಲಯ ಹಂಚಿಕೊಂಡ ವಿವರವನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ರದ್ದುಗೊಂಡಿರುವ ಮದ್ಯ ನೀತಿಯನ್ನು ರೂಪಿಸುವಲ್ಲಿ ಮತ್ತು ಕಿಕ್‌ಬ್ಯಾಕ್‌ಗೆ ಬೇಡಿಕೆಯಿಡುವಲ್ಲಿ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಪೂರಕ ಸಾಕ್ಷ್ಮಧಾರಗಳಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್‌ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್‌ ಕೇಜ್ರಿವಾಲ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Shwetha M