ಮೈಸೂರಿನಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ಸರ್ಕಾರಿ ಬಸ್ಸುಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶ!

ಮೈಸೂರಿನಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ಸರ್ಕಾರಿ ಬಸ್ಸುಗಳಲ್ಲಿ ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶ!

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ಇಂದಿನಿಂದ ವಿಶೇಷ ಪೂಜೆಗಳು ಆರಂಭವಾಗಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಸಾಗರ ಹರಿದುಬಂದಿದೆ.

ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ಧಾರವಾಡ ಕೃಷಿ ವಿವಿಯ ಮೆಂತೆ, ಹೆಸರು ಕಾಳು! – ಏನೆಲ್ಲಾ ಪ್ರಯೋಗ ನಡೆಯಲಿದೆ?

ಚಾಮುಂಡೇಶ್ವರಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿದೆ. ದೇವಾಲಯವನ್ನ ವಿಶೇಷ ಹೂಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದರು. ಈ ಬಾರಿ 300 ರೂ., 2000 ರೂ. ಟಿಕೆಟ್ ಹಾಗೂ ಧರ್ಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 2000 ರೂ. ಟಿಕೆಟ್‌ಗೆ ಪ್ರಸಾದ ಕಿಟ್ ಸಹ ನೀಡಲಾಗುವುದು. ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧ ಆಗಿದೆ.

ಲಲಿತ್ ಮಹಲ್ ಹೆಲಿಪ್ಯಾಡ್‌ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಮೆಟ್ಟಿಲು ಮೂಲಕ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಬಸ್‌ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ ಹಾಗೂ ಪುರುಷರಿಗೆ ಉಚಿತ ಬಸ್ ಪ್ರಯಾಣ ಇರುವುದರ ಜೊತೆಗೆ, ಬೆಟ್ಟಕ್ಕೆ ಅನೇಕ ಸರ್ಕಾರಿ ಬಸ್ಸುಗಳನ್ನು ಹೆಚ್ಚುವರಿಯಾಗಿ ಬಿಡಲಾಗುತ್ತದೆ. ಸಾಮಾನ್ಯ ಬಸ್ಸುಗಳು ಸೇರಿದಂತೆ ಹವಾನಿಯಂತ್ರಿತ ಬಸ್ಸುಗಳ ಸೌಕರ್ಯವನ್ನೂ ಕಲ್ಪಿಸಲಾಗಿದೆ. ಆ ಹಿನ್ನೆಲೆಯಲ್ಲಿ, ಉಚಿತ ಟಿಕೆಟ್ ಸೌಕರ್ಯವನ್ನೂ ಕಲ್ಪಿಸಲಾಗಿರುದರಿಂದ ಜನರು ಸಾಗರೋಪಾದಿಯಲ್ಲಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆಯಿದೆ.

Shwetha M