ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಅಸ್ಸಾಂ ಸರ್ಕಾರ – ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಾಯ್ದೆ ರದ್ದು
ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಹಸಿರು ನಿಶಾನೆ ತೋರಿದ ಬೆನ್ನಲ್ಲೇ ಇದೀಗ ಅಸ್ಸಾಂ ಕೂಡ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಅಸ್ಸಾಂನಲ್ಲಿ ಹಳೆಯ ‘ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ-1930’ ರದ್ದುಗೊಳಿಸಲಾಗಿದೆ. ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರವು ಹಳೆಯ ಕಾನೂನನ್ನು ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.
ಇದನ್ನೂ ಓದಿ: ಅನ್ನದಾತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುವ ಭೀತಿ – 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ, ಇಂಟರ್ನೆಟ್ ಸ್ಥಗಿತ..!
2024ರ ಫೆಬ್ರವರಿ 23ರಂದು ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ ಸಚಿವ ಸಂಪುಟವು ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ-1935 ಅನ್ನು ರದ್ದುಗೊಳಿಸಲು ನಿರ್ಧರಿಸಿದೆ. ಈ ಕಾಯ್ದೆಯು ವಧು ಮತ್ತು ವರರು ಕ್ರಮವಾಗಿ 18 ಮತ್ತು 21 ರ ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಸಹ ವಿವಾಹ ನೋಂದಣಿಗೆ ಅವಕಾಶ ನೀಡುವ ನಿಬಂಧನೆಗಳನ್ನು ಒಳಗೊಂಡಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಜಯಂತ ಮಲ್ಲಬರುವ, ‘ಇದು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಸಾಧಿಸುವತ್ತ ಒಂದು ಹೆಜ್ಜೆ. ಈಗ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಡಿಕೊಳ್ಳಲಾಗುವುದು’ ಎಂದು ಅವರು ಹೇಳಿದರು.
ಮುಸ್ಲಿಂ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತಿರುವ 94 ಮುಸ್ಲಿಂ ರಿಜಿಸ್ಟ್ರಾರ್ಗಳನ್ನು ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು. ಅವರಿಗೆ ತಲಾ 2 ಲಕ್ಷ ರು. ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದರು. ಇತ್ತೀಚೆಗೆ ಉತ್ತರಾಖಂಡ ಸರ್ಕಾರವು ಏಕರೂಪ ಸಂಹಿತೆ ಜಾರಿಗೆ ತಂದು, ಇದನ್ನು ಜಾರಿ ಮಾಡಿದ ಸ್ವತಂತ್ರ ಭಾರತದ ಮೊದಲ ದೇಶ ಎನ್ನಿಸಿಕೊಂಡಿತ್ತು.