ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ದಿನಾಂಕ ಪ್ರಕಟ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: 2023 ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ದಿನಾಂಕ ಪ್ರಕಟವಾಗಿದ್ದು, ಸೆ.5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆ. 10 ರಿಂದ ಆರಂಭವಾಗಲಿದ್ದು, ಸೆ.5ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅದೇ ದಿನ ಮಾಹಿತಿ ಪುಸ್ತಕ ಕೂಡ ಪ್ರಕಟಿಸಲಾಗುತ್ತದೆ. ಸೆ.30 ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಡಿಪೋದಲ್ಲಿ ರಜಿನಿಕಾಂತ್‌ ರೌಂಡ್ಸ್‌ – ರಾಯರ ಮಠದಲ್ಲಿ ಜೈಲರ್‌ ವಿಶೇಷ ಪೂಜೆ

ಇನ್ನು ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕವನ್ನು ಕೂಡ ನಿಗದಿಪಡಿಸಲಾಗಿದೆ. ಅ. 3ರ ಒಳಗೆ ಅಭ್ಯರ್ಥಿಗಳು ಶುಲ್ಕ ಪಾವತಿಲು ಸೂಚನೆ ನೀಡಲಾಗಿದೆ. ನವೆಂಬರ್ 5 ರಂದು ಲಿಖಿತ ಪರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ. ವಿಜ್ಞಾನ, ಮಾನವಿಕ ವಿಭಾಗಗಳ ಒಟ್ಟು 41 ವಿಷಯಗಳ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತದೆ. ಕೆಇಎ ಇದೇ ಮೊದಲು ಈ ಪರೀಕ್ಷೆ ನಡೆಸುತ್ತಿದೆ.

suddiyaana