ಫೆ.17 ರ ಇಡಿ ವಿಚಾರಣೆಗೆ ಹಾಜರಾಗಿ – ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್ ಸಮನ್ಸ್

ಫೆ.17 ರ ಇಡಿ ವಿಚಾರಣೆಗೆ ಹಾಜರಾಗಿ – ಕೇಜ್ರಿವಾಲ್‌ಗೆ ದೆಹಲಿ ಕೋರ್ಟ್ ಸಮನ್ಸ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರೀವಾಲ್‌ ಅವರು ಕಾನೂನು ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ದೂರಿನ ಆಧಾರದಲ್ಲಿ ದೆಹಲಿ ಕೋರ್ಟ್ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಫೆ.17 ಕ್ಕೆ ಸಮನ್ಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜೈಲಿನಲ್ಲೇ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದ ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್!

ಅರವಿಂದ ಕೇಜ್ರೀವಾಲ್‌ಗೆ ಇ.ಡಿ 5 ಬಾರಿ ಸಮನ್ಸ್‌ ಜಾರಿ ಮಾಡಿತ್ತು. ಆದ್ರೆ ಕೇಜ್ರೀವಾಲ್‌ ವಿಚಾರಣೆಗೆ ಸಹಕರಿಸುತ್ತಿಲ್ಲ. ವಿಚಾರಣೆಗೆ ಗೈರಾಗಿ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಕೇಜ್ರಿವಾಲ್ ವಿರುದ್ಧ ಫೆ.3ರಂದು ಇ.ಡಿ. ಹೊಸ ಪ್ರಕರಣ ದಾಖಲಿಸಿ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ದಿವ್ಯಾ ಮಲ್ಹೋತ್ರಾ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಎದುರು ಫೆ.17ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಇನ್ನು ಕೋರ್ಟ್ ಆದೇಶದ ಬಳಿಕ ಪ್ರತಿಕ್ರಿಯಿಸಿರುವ ಆಪ್, ನ್ಯಾಯಾಲಯದ ಆದೇಶ ಅಧ್ಯಯನ ಮಾಡಿ ಅದಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.

Shwetha M