ಗಂಡನನ್ನು ಬಿಟ್ಟು ಇಬ್ಬರು ಪುರುಷರ ಜೊತೆ ಆಂಟಿಯ ತುಂಟಾಟ – ಪ್ರೇಯಸಿ ಮತ್ತು ಮಗನನ್ನೇ ಕೊಂದ ಪ್ರಿಯಕರ
ಆ ಮನೆಯಲ್ಲಿ ಇದ್ದದ್ದು ತಾಯಿ ಮಗ ಇಬ್ಬರೇ. ಗಂಡನನ್ನ ಬಿಟ್ಟಿದ್ದ ಆ ಮಹಿಳೆ ಮಗನ ಜೊತೆ ಕಳೆದ ಎರಡು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಆದರೆ ಇದ್ದಕ್ಕಿದ್ದಂತೆ ಮೊನ್ನೆ ಅದೇ ಮನೆಯಲ್ಲಿ ತಾಯಿ ಮಗನನ್ನ ಭೀಕರವಾಗಿ ಕೊಲೆ ಮಾಡಲಾಗಿತ್ತು. ಗಂಡನೇ ಬಂದು ಇಬ್ಬರನ್ನ ಕೊಲೆ ಮಾಡಿ ಹೋಗಿದ್ದಾನೆ ಎಂದು ಮಹಿಳೆಯ ಪೋಷಕರು ಆರೋಪ ಮಾಡಿದ್ದರು. ಆದರೆ ಈಗ ಅದೇ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಇದನ್ನೂ ಓದಿ : ಪ್ರಯಾಣಿಕ ಬೋಟ್, ಸೇನಾ ನೆಲೆಯ ಮೇಲೆ ಉಗ್ರರ ದಾಳಿ – 64 ಮಂದಿ ಸಾವು
ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ (Bagalagunte Police Station) ವ್ಯಾಪ್ತಿಯಲ್ಲಿ ನಡೆದಿದ್ದ ತಾಯಿ-ಮಗು ಹತ್ಯೆ ಪ್ರಕರಣದ ಸ್ಫೋಟಕ ಸತ್ಯ ಬಯಲಾಗಿದ್ದು, ಮೃತಳ ಪ್ರಿಯಕರನೇ ಇಬ್ಬರನ್ನೂ ಕೊಲೆ ಮಾಡಿರುವುದು ಬಹಿರಂಗವಾಗಿದೆ. ನವನೀತ (35) ಹಾಗೂ ಪುತ್ರ ಸಾಯಿ ಸೃಜನ್ (8) ಹತ್ಯೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪ್ರಿಯಕರ ಶೇಖರ್‌ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೊಲೆಯಾದ ಮಹಿಳೆ (Women) ನವನೀತ ತನ್ನ ಪತಿ ಚಂದ್ರುವಿನಿಂದ ಬೇರ್ಪಟ್ಟು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಳೆದ 2 ವರ್ಷಗಳಿಂದ ಮಗ ಸಾಯಿ ಸೃಜನ್ ಜೊತೆಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನವನೀತ ಗಂಡನಿಂದ ದೂರಾದ ಮೇಲೆ ಆರೋಪಿ ಶೇಖರ್ ಜೊತೆಗೆ ಸ್ನೇಹ ಬೆಳೆಸಿದ್ದಳು. ಬಳಿಕ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು. ಆದರೆ ಇತ್ತೀಚೆಗೆ ನವನೀತ ಇತ್ತೀಚೆಗೆ ಶೇಖರ್ ಬಿಟ್ಟು ಲೋಕೇಶ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದಳು. ಇದನ್ನ ಕಂಡ ಮೊದಲ ಪ್ರಿಯಕರ ಶೇಖರ್ ನವನೀತಳಿಗೆ ವಾರ್ನಿಂಗ್ ಕೊಟ್ಟಿದ್ದಾನೆ. ಲೋಕೇಶ್ ಸಹವಾಸ ಬಿಡುವಂತೆ ಎಚ್ಚರಿಕೆ ಕೊಟ್ಟಿದ್ದಾನೆ, ಆಕೆ ಮೇಲೆ ಹಲ್ಲೆಯನ್ನೂ ಮಾಡಿದ್ದಾನೆ. ಆದರೂ ನವನೀತ ಲೋಕೇಶ್ ಜೊತೆಗೆ ಸಂಪರ್ಕ ಮುಂದುವರಿಸಿದ್ದಳು ಎನ್ನಲಾಗಿದೆ.
ನವನೀತ ನಡವಳಿಕೆಯಿಂದ ಬೇಸತ್ತಿದ್ದ ಶೇಖರ್ ಶನಿವಾರ ಎಂದಿನಂತೆ ನವನೀತಳ ಮನೆಗೆ ಬಂದಿದ್ದಾನೆ. ನವನೀತಳ ಮಗನಿಗೆ ಜ್ಯೂಸ್ ತೆಗೆದುಕೊಂಡು ಬರುವಂತೆ ಹೇಳಿದ್ದಾನೆ. ಈ ವೇಳೆ ಆಕೆಯೊಂದಿಗೆ ಜಗಳ ಶುರು ಮಾಡಿ, ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ನಂತರ ಅಂಗಡಿಯಿಂದ ಜ್ಯೂಸ್ ತೆಗೆದುಕೊಂಡು ಬಂದ ಮಗುವಿಗೆ ಮ್ಯಾಜಿಕ್ ಹೇಳಿಕೊಡುತ್ತೇನೆ ಎಂದು ನಂಬಿಸಿ, ಸೀರೆಯಿಂದ ಮಗುವಿನ ಎರಡೂ ಕೈಕಾಲುಗಳನ್ನು ಕಟ್ಟಿದ್ದಾನೆ. ತಲೆ ದಿಂಬಿನಿಂದ ಉಸಿರುಗಟ್ಟಿಸಿ ಬಾಲಕನನ್ನೂ ಕೊಲೆ ಮಾಡಿದ್ದಾನೆ. ಎರಡು ಮೃತ ದೇಹಗಳನ್ನ ರೂಮಿನಲ್ಲಿ ಮಂಚದ ಮೇಲೆ ಎಸೆದು ಪರಾರಿಯಾಗಿದ್ದ. ಅಕ್ಕ ಪಕ್ಕದ ಏರಿಯಾ ಜನರಿಗೆ ನನಗೆ ಮೋಸ ಮಾಡಿದ್ದಾಳೆ ಅದಕ್ಕಾಗಿ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.