6 ಓವರ್ 159 ರನ್ಸ್.. AUS ಚರಿತ್ರೆ 4 ಡಕ್ಔಟ್.. ಜೈಸ್ವಾಲ್ಗೆ ರನ್ ಬರ
ಟೀಂ INDಗೆ ಹ್ಯಾಟ್ರಿಕ್ ಸೋಲು!

ಕ್ರಿಕೆಟ್ ಲೋಕದ ಇಂಟ್ರೆಸ್ಟಿಂಗ್ ಸುದ್ದಿಗಳು
ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬಳಿಕ ನಾಯಕ ಶ್ರೇಯಸ್ ಅಯ್ಯರ್ ಬೌಲರ್ಗಳ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ. ತಂಡದ ಬೌಲಿಂಗ್ ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಈಡನ್ ಪಾರ್ಕ್ನ ಸಣ್ಣ ಬೌಂಡರಿಗಳು ಬೌಲರ್ಗಳಿಗೆ ಸವಾಲಾಗಿದ್ದವು. ಆದರೆ ಮುಂದಿನ ಪಂದ್ಯದಲ್ಲಿ ತಂಡ ಪುಟಿದೇಳುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ಭಾರತೀಯ ವೇಗಿ ಪ್ರಿನ್ಸ್ ಯಾದವ್ ಅವರ ಪ್ರದರ್ಶನಕ್ಕೆ ಮಾಜಿ ಕ್ರಿಕೆಟಿಗ ಹನುಮ ವಿಹಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬುಮ್ರಾಗೆ ಹೋಲಿಕೆ ಮಾಡುವುದಿಲ್ಲ, ಆದರೆ ಪ್ರಿನ್ಸ್ ಯಾದವ್ ಉತ್ತಮ ಸಾಮರ್ಥ್ಯ ಹೊಂದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಮುಖ ಓವರ್ಗಳಲ್ಲಿ ಜವಾಬ್ದಾರಿಯುತ ಬೌಲಿಂಗ್ ಮಾಡುತ್ತಿರುವ ಪ್ರಿನ್ಸ್, ಟೀಂ ಇಂಡಿಯಾದ ಭವಿಷ್ಯದ ವೇಗದ ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಮೂಡಿಸಿದ್ದಾರೆ.
ಹಾಂಗ್ ಕಾಂಗ್ನಲ್ಲಿ ನಡೆಯುತ್ತಿರುವ ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಹ್ಯಾಟ್ರಿಕ್ ಸೋಲು ಖಂಡಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಸೋತ ಟೀಂ ಇಂಡಿಯಾ, 2ನೇ ಪಂದ್ಯದಲ್ಲಿ ಅರಬ್ ಎಮಿರೇಟ್ಸ್ ವಿರುದ್ಧ ಸೋತಿದೆ. 3ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕೂಡ ಟೀಂ ಇಂಡಿಯಾ ಸೋತಿದೆ. ಈ ಮೂಲಕ ಟೀಂ ಇಂಡಿಯಾ ಹ್ಯಾಟ್ರಿಕ್ ಸೋಲು ಖಂಡಿದೆ.
ನ್ಯೂಝಿಲೆಂಡ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಬಿದ್ದಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಸ್ಥಾನಕ್ಕೆ ಜಮ್ಮು ಮತ್ತು ಕಾಶ್ಮೀರದ ಬಲಗೈ ವೇಗಿ ಆಖಿಬ್ ನಬಿ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತದ ಅಂಡರ್-19 ತಂಡದ ಆಯ್ಕೆ ಇದೀಗ ಗಮನ ಸೆಳೆದಿದೆ. ಮಾಜಿ ನಾಯಕ ರಾಹುಲ್ ದ್ರಾವಿಡ್ ಪುತ್ರ ಅನ್ವಯ್ ದ್ರಾವಿಡ್ ಹಾಗೂ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ಸೆಹ್ವಾಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನವೆಂಬರ್ 5ರಿಂದ 14ರವರೆಗೆ ಒಮಾನ್ನಲ್ಲಿ ನಡೆಯಲಿರುವ ಅಂಡರ್-19 ಏಷ್ಯಾಕಪ್ನಲ್ಲಿ ಈ ಯುವ ಆಟಗಾರರು ಆಡಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತ ಎ ತಂಡದಲ್ಲಿ ಆಡುತ್ತಿರುವ ಯಶಸ್ವಿ ಜೈಸ್ವಾಲ್ಗೆ ರನ್ ಬರ ಎದುರಾಗಿದೆ. ನ್ಯೂಜಿಲೆಂಡ್ ಎ ವಿರುದ್ಧದ ಸರಣಿಯಲ್ಲಿ ಅವರು ಸತತ ವೈಫಲ್ಯ ಅನುಭವಿಸುತ್ತಿದ್ದಾರೆ. ಒಂಬತ್ತು ಇನ್ನಿಂಗ್ಸ್ಗಳಲ್ಲಿ ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಮುಂಬರುವ ಪಂದ್ಯಗಳಲ್ಲಿ ಜೈಸ್ವಾಲ್ ತಮ್ಮ ಬ್ಯಾಟಿಂಗ್ ಲಯ ಕಂಡುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಐಪಿಎಲ್ 2027ಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯ ಚರ್ಚೆ ಶುರುವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಕಳೆದ ಎರಡು ಆವೃತ್ತಿಗಳಲ್ಲಿ ತಂಡದ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಹೀಗಾಗಿ ಯಶಸ್ವಿ ನಾಯಕ ರೋಹಿತ್ ಶರ್ಮಾ ಮತ್ತೆ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಬಲವಾದ ವರದಿಗಳು ಹರಿದಾಡುತ್ತಿವೆ. ಆದರೆ ಈ ಬಗ್ಗೆ ಫ್ರಾಂಚೈಸಿಯಿಂದ ಅಧಿಕೃತ ಘೋಷಣೆ ಬಂದಿಲ್ಲ.
ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ಆಟಗಾರ್ತಿ ಪೂನಂ ರಾವತ್ ತಮ್ಮ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. 73 ಏಕದಿನ ಪಂದ್ಯಗಳಲ್ಲಿ 2,299 ರನ್ ಗಳಿಸಿರುವ ಅವರು, 2017ರ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ 86 ರನ್ ಗಳಿಸಿದ್ದರು. ನಾಲ್ಕು ವರ್ಷಗಳ ಕಾಲ ಭಾರತ ತಂಡಕ್ಕೆ ಮರಳಲು ಪ್ರಯತ್ನಿಸಿದರೂ ಅವಕಾಶ ಸಿಗಲಿಲ್ಲ. ಇದೀಗ ಯುವ ಆಟಗಾರರಿಗೆ ತರಬೇತಿ ನೀಡುವ ಗುರಿ ಹೊಂದಿದ್ದಾರೆ.
ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ಆಲ್ರೌಂಡರ್ ತನುಷ್ ಕೋಟ್ಯಾನ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹರಿಯಾಣ ವಿರುದ್ಧದ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್ನಲ್ಲಿ 81 ರನ್ ನೀಡಿ ಎಂಟು ವಿಕೆಟ್ ಕಬಳಿಸಿದ್ದಾರೆ. ಮೊದಲ ಇನ್ನಿಂಗ್ಸ್ನಲ್ಲಿ ಮೂರು ವಿಕೆಟ್ ಪಡೆದಿದ್ದ ಅವರು ಪಂದ್ಯದಲ್ಲಿ ಒಟ್ಟು 11 ವಿಕೆಟ್ ಪಡೆದು ಮಿಂಚಿದ್ದಾರೆ. ಈ ಪ್ರದರ್ಶನ ದೇಶೀಯ ಕ್ರಿಕೆಟ್ನಲ್ಲಿ ಅವರ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿ ಅವರನ್ನು ಭೇಟಿಯಾದ ಪಾಪರಾಜಿಯೊಬ್ಬರು ಹೇಳಿದ ಮಾತು ಇದೀಗ ಗಮನ ಸೆಳೆಯುತ್ತಿದೆ. “ವಿರಾಟ್ ಭಾಯ್, ನಿಮ್ಮ One8 ಬ್ರ್ಯಾಂಡ್ ಶೂ ಖರೀದಿಸಿದ್ದೇನೆ” ಎಂದು ಹೇಳುತ್ತಿದ್ದಂತೆ ಕೊಹ್ಲಿ ಖುಷಿಯಿಂದ ಪ್ರತಿಕ್ರಿಯಿಸಿದ್ದಾರೆ. ಅಭಿಮಾನಿಯೊಬ್ಬರು ತಮ್ಮ ಬ್ರ್ಯಾಂಡ್ ಉತ್ಪನ್ನ ಖರೀದಿಸಿರುವುದನ್ನು ಕಂಡು ವಿರಾಟ್ ಸಂತಸ ವ್ಯಕ್ತಪಡಿಸಿದ್ದು, ಈ ಪುಟ್ಟ ಸಂಭಾಷಣೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನೋಡಿರಿ

