ಭಾರತಕ್ಕೆ ಹೀನಾಯ ಸೋಲು – ಕಾಂಗರೂಗಳ ತಂತ್ರಕ್ಕೆ ಸೋತು ಶರಣಾದ ಟೀಮ್‌ ಇಂಡಿಯಾ   

ಭಾರತಕ್ಕೆ ಹೀನಾಯ ಸೋಲು – ಕಾಂಗರೂಗಳ ತಂತ್ರಕ್ಕೆ ಸೋತು ಶರಣಾದ ಟೀಮ್‌ ಇಂಡಿಯಾ   

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: ಹೋಗಿ ಬಾ ಮಗಳೇ!! – ಐಶ್ವರ್ಯಗೆ ಬಿಗ್‌ ಬಾಸ್‌ ಭಾವುಕ ವಿದಾಯ

ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಸ್ಯಾಮ್​ ಕೊನ್​ಸ್ಟಾಸ್ (60), ಉಸ್ಮಾನ್ ಖ್ವಾಜಾ (57), ಮಾರ್ನಸ್ ಲಾಬುಶೇನ್ (72) ಅರ್ಧಶತಕ ಬಾರಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ (140) ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಬುಮ್ರಾ 4 ವಿಕೆಟ್ ಪಡೆದರೆ, ಜಡೇಜಾ 3 ವಿಕೆಟ್ ಕಬಳಿಸಿದರು.

ಇನ್ನು ಆಸ್ಟ್ರೇಲಿಯಾದ  ಗುರಿಯನ್ನು ಬೆನ್ನು ಹತ್ತಿದ್ದ ಭಾರತ ಉತ್ತಮ ಆರಂಭ ಪಡೆಯಲಿಲ್ಲ. ಸೀನಿಯರ್ಸ್‌ ಈ ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿದ್ರು. ಯುವ ಆಟಗಾರರ ಹೋರಾಟದ ಪರಿಣಾಮ 369 ರನ್​ಗಳಿಸಿತ್ತು. ಇದರೊಂದಿಗೆ ಆಸ್ಟ್ರೇಲಿಯಾ 105 ರನ್​ಗಳ ಮುನ್ನಡೆ ಕಾಯ್ದುಕೊಂಡಿತ್ತು. ಎರಡನೇ ಇನ್ನಿಂಗ್ಸ್​ನಲ್ಲಿ 234 ರನ್​ಗಳಿಸಿದ್ದ ಆಸ್ಟ್ರೇಲಿಯಾ ಭಾರತದ ಗೆಲುವಿಗೆ ಒಟ್ಟು 339 ರನ್​​ಗಳ ಗುರಿಯನ್ನು ನೀಡಿತ್ತು. ಭಾರತ ಎರಡನೇ ಇನ್ನಿಂಗ್ಸ್​ನಲ್ಲಿ 155 ರನ್​​ಗಳಿಸಿ ಸೋಲಿಗೆ ಶರಣಾಗಿದೆ.

Shwetha M

Leave a Reply

Your email address will not be published. Required fields are marked *