ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಪತ್ನಿ ಗರ್ಭಿಣಿ – ಭಾರತೀಯ ಸಂಪ್ರದಾಯದ ಪ್ರಕಾರ ಸೀಮಂತ ಸಂಭ್ರಮ

ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಪತ್ನಿ ಗರ್ಭಿಣಿ – ಭಾರತೀಯ ಸಂಪ್ರದಾಯದ ಪ್ರಕಾರ ಸೀಮಂತ ಸಂಭ್ರಮ

ಆಸ್ಟ್ರೇಲಿಯಾ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಶೀಘ್ರದಲ್ಲೇ ತಂದೆಯಾಗಲಿದ್ದಾರೆ. ಈ ಶುಭ ಸುದ್ದಿಯನ್ನು ಮ್ಯಾಕ್ಸ್‌ವೆಲ್ ಪತ್ನಿ ವಿನಿ ರಾಮನ್ ತಿಳಿಸಿದ್ದಾರೆ. ಅಷ್ಟೇ ಅಲ್ಲ, ವಿನಿ ರಾಮನ್ ಭಾರತೀಯ ಸಂಪ್ರದಾಯದಂತೆ ಸೀಮಂತ ಮಾಡಿಸಿಕೊಂಡ ಖುಷಿಯನ್ನು ಕೂಡಾ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಎಂ.ಎಸ್ ಧೋನಿಗೆ ಜಗತ್ತಿನಾದ್ಯಂತ ಅಭಿಮಾನಿಗಳು – ಧೋನಿ ಪತ್ನಿ ಮಾತ್ರ ‘ಅಲ್ಲು ಅರ್ಜುನ್ ‘ಅಭಿಮಾನಿಯಂತೆ..!

ಮಾರ್ಚ್ 27, 2022 ರಲ್ಲಿ ಬಹು ಕಾಲದ ಗೆಳತಿ ವಿನಿ ರಾಮನ್ ಜೊತೆ ಗ್ಲೆನ್ ಮ್ಯಾಕ್ಸ್‌ವೆಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಸೀಮಂತ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡಿರುವ ವಿನಿ ರಾಮನ್, ಕುಟುಂಬಕ್ಕೆ ಹೊಸ ಅತಿಥಿ ಆಗಮಿಸುವ ಸಿಹಿ ಸುದ್ದಿ ನೀಡಿದ್ದಾರೆ. ವಿನಿ ರಾಮನ್ ತಮಿಳುನಾಡು ಮೂಲದವರಾಗಿದ್ದು, ಹೀಗಾಗಿಯೇ ವಿವಾಹ ಸಮಾರಂಭ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಲ್ಲಿ ನೆರವೇರಿತ್ತು. ಇದೀಗ ತಮಿಳುನಾಡಿನ ಹಿಂದೂ ಸಂಪ್ರದಾಯದಂತೆ ವಲೈಕಾಪ್ಪು  ಅಂದರೆ ಸೀಮಂತ ಕಾರ್ಯ ನೆರವೇರಿಸಲಾಗಿದ್ದು, ಈ ಸಮಾರಂಭದ ಫೋಟೋಗಳನ್ನು ವಿನಿ ರಾಮನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ಬೇಬಿ ಮ್ಯಾಕ್ಸ್‌ವೆಲ್‌ರನ್ನು ಸಾಂಪ್ರದಾಯಿಕ ರೀತಿಯಲ್ಲಿ ಆಶೀರ್ವದಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇನ್ನು ಈ ಫೋಟೋದಲ್ಲಿ ವಿನಿ ರಾಮನ್ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಪತ್ನಿಗೆ ವಿಶೇಷ ಉಡುಗೊರೆ ನೀಡುವ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಫೋಟೋಗೆ ಪೋಸ್ ನೀಡಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಾವು ತಂದೆ-ತಾಯಿಯಾಗುತ್ತಿರುವುದನ್ನು ಘೋಷಿಸಲು ನಾನು ಭಾವಪರವಶನಾಗಿದ್ದೇನೆ ಎಂದು ಪತ್ನಿಗೆ ಗ್ಲೆನ್ ಮ್ಯಾಕ್ಸ್ವೆಲ್ ಬರೆದಿರುವ ವಿಶೇಷ ಪತ್ರವನ್ನು ಕೂಡ ವಿನಿ ರಾಮನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

suddiyaana