ಕಣಕ್ಕಿಳಿಯದ ಪಂದ್ಯದಲ್ಲಿ ಸ್ಪಿನ್ ದಿಗ್ಗಜನ ವಿದಾಯ- ಅಶ್ವಿನ್‌ಗೆ ವಿಶೇಷ ಗಿಫ್ಟ್ ನೀಡಿದ ಆಸ್ಟ್ರೇಲಿಯಾ ಆಟಗಾರರು
ಟೀಮ್ ಇಂಡಿಯಾದಲ್ಲಿ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಯುಗಾಂತ್ಯವಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ ರವಿಚಂದ್ರನ್ ಅಶ್ವಿನ್. ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದರು. ಇದಾದ ನಂತರ ಆಸ್ಟ್ರೇಲಿಯಾ ಆಟಗಾರರು ನಡೆದುಕೊಂಡ ರೀತಿಗೆ ಕ್ರಿಕೆಟ್ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕೊಹ್ಲಿ ನೋವಿನ ಅಪ್ಪುಗೆ, ಕಣ್ಣೀರ ವಿದಾಯ – ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್ ಭಾವುಕ ಕ್ಷಣಗಳು
ರವಿಚಂದ್ರನ್ ಅಶ್ವಿನ್ ಅವರ ನಿವೃತ್ತಿ ನಿರ್ಧಾರ ಆಸ್ಟ್ರೇಲಿಯಾ ಆಟಗಾರರಿಗೂ ಸರ್ಪ್ರೈಸ್ ಆಗಿತ್ತು. ತಮ್ಮ ನೆಲದಲ್ಲಿ ಬಂದು ವಿದಾಯ ಹೇಳಿದ ಸ್ಪಿನ್ ದಿಗ್ಗಜನಿಗೆ ಉಡುಗೊರೆ ನೀಡಲು ಕೂಡಾ ಆಸ್ಟ್ರೇಲಿಯನ್ನರು ಮರೆಯಲಿಲ್ಲ. ರವಿಚಂದ್ರನ್ ಅಶ್ವಿನ್ ಸುದ್ದಿಗೋಷ್ಠಿ ಮುಗಿಸಿ ಹೊರಬರುತ್ತಿದ್ದಂತೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ನಾಥನ್ ಲಿಯಾನ್ ಓಡಿ ಬಂದಿದ್ದರು. ಅಷ್ಟೇ ಅಲ್ಲದೆ ಅಶ್ವಿನ್ ಅವರಿಗೆ ಆಸ್ಟ್ರೇಲಿಯಾ ಆಟಗಾರರ ಸಹಿ ಹೊಂದಿರುವ ಜೆರ್ಸಿಯನ್ನು ನೆನಪಿನ ಕಾಣಿಕೆಯಾಗಿ ನೀಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಆಟಗಾರನಿಗೆ ಗೌರವಾಯುತವಾಗಿ ಬೀಳ್ಕೊಡುಗೆ ನೀಡಿದ್ದಾರೆ.ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ನಾಥನ್ ಲಿಯಾನ್ ಅವರ ನಡೆಗೆ ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಲ್ಲದೆ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿಯದ ಆಟಗಾರನನ್ನು ಆಸ್ಟ್ರೇಲಿಯಾ ಕ್ರಿಕೆಟಿಗರು ಗೌರವಾಯುತವಾಗಿ ನಡೆಸಿಕೊಂಡ ಪರಿಯನ್ನು ಅನೇಕರು ಪ್ರಶಂಸಿದ್ದಾರೆ.