ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ – ಸಿಎಂ ಸಿದ್ದರಾಮಯ್ಯ ಘೋಷಣೆ

ಸಾವಿರಾರು ಗಿಡಗಳನ್ನ ಪೋಷಿಸಿದ ಮಹಾತಾಯಿ ಸಾಲುಮರದ ತಿಮ್ಮಕ್ಕ ನಮ್ಮನ್ನ ಅಗಲಿದ್ದಾರೆ. ಇದೀಗ ಸಮಾಜಕ್ಕೆ ಮಾದರಿ ಬದುಕಿದ್ದ ವೃಕ್ಷಮಾತೆ ಹೆಸರಿನಲ್ಲಿ ಪ್ರಶಸ್ತಿ ನೀಡಲು ರಾಜ್ಯಸರ್ಕಾರ ಮುಂದಾಗಿದೆ. ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರತಿವರ್ಷ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದನ್ನೂ ಓದಿ: ಇಂಜುರಿಯಿಂದ ಶ್ರೇಯಸ್, ಗಿಲ್ ಔಟ್ – KL ರಾಹುಲ್ ಗೆ ODI ಕ್ಯಾಪ್ಟನ್ಸಿ?
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಇಂದು ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ-2025 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವ ಉದ್ಘಾಟಿಸಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ರೂ ದತ್ತಿ ನಿಧಿ ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತೀ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತೀ ವರ್ಷ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೇಂದ್ರದ ವರದಿಯ ಪ್ರಕಾರ, 131 ನಗರಗಳು ಮಾಲಿನ್ಯದಿಂದ ಕೂಡಿದ್ದು, ನಿಗದಿತ ಮಟ್ಟಕ್ಕಿಂತಲೂ ಹೆಚ್ಚಿದೆ. ಅದರಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಸೇರಿವೆ. ಇದು ಆತಂಕಕಾರಿ ವಿಷಯ. ಬೆಂಗಳೂರಿನಲ್ಲಿ ವಾಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲು ಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದ ಸಿಎಂ, ಇತ್ತೀಚೆಗೆ ನಿಧನರಾದ ಅವರು ಬಹಳಷ್ಟು ಮರಗಿಡಗಳನ್ನು ತಮ್ಮ ಮಕ್ಕಳಂತೆ ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಪ್ರತಿಯೊಬ್ಬರೂ ಸಾಲಮರದ ತಿಮ್ಮಕ್ಕನವರಂತೆ ಆಗಬೇಕು ಎನ್ನುವ ಆಶಯ ನಮ್ಮದು ಎಂದರು.
ಇಂದಿರಾ ಗಾಂಧಿಯವರು ಪರಿಸರ ಮತ್ತು ಅರಣ್ಯ ರಕ್ಷಣೆಗೆ ಹಲವು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಕೇವಲ ಸರ್ಕಾರದ ಮೇಲಿಲ್ಲ. ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಭೂಮಿಯ ಮೇಲಿನ ಜೀವಸಂಕುಲಕ್ಕೆ ಉತ್ತಮ ಪರಿಸರದಲ್ಲಿ ಬದುಕಲು ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು, ದಾವಣಗೆರೆ, ಕಲಬುರಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು, ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ನೋಡಿರಿ

