MLC ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಾಂತರ ಪರ್ವ ಕೂಡಾ ಜೋರಾಗಿಯೇ ಸಾಗುತ್ತಿದೆ. ಇದೀಗ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಬಿಜೆಪಿ ಇಬ್ಬರು ಹಾಲಿ ವಿಧಾನಪರಿಷತ್ ಸದಸ್ಯರು ಹಾಗೂ ಓರ್ವ ಶಾಸಕ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ.
ಇದನ್ನೂ ಓದಿ: ಬಿ.ವೈ ವಿಜಯೇಂದ್ರ ಕ್ಷೇತ್ರ ಕೊನೆಗೂ ಫೈನಲ್ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ ಗೊತ್ತಾ?
ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಸದ್ಯದಲ್ಲೇ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಬಡವರ ಪ್ರತಿನಿಧಿಯಾಗಿ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡುತ್ತೇನೆ. ಈ ಮೂಲಕ ಮಾಜಿ ಸಚಿವ ಈಶ್ವರಪ್ಪ ಸವಾಲನ್ನು ನಾನು ಸ್ವೀಕಾರ ಮಾಡಿದ್ದೇನೆ. ನನ್ನನ್ನ ಚುನಾವಣಾ ಕಣದಲ್ಲಿ ಎದುರಿಸಿ ಎಂದು ಈಶ್ವರಪ್ಪಗೆ ಸವಾಲು ಹಾಕಿದರು. ಈ ಮೂಲಕ ಈ ಬಾರಿಯ ಶಿವಮೊಗ್ಗ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಖಚಿತಪಡಿಸಿದರು.