ವೇಗ ಪಡೆದುಕೊಂಡ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾಮಗಾರಿ – 2025 ರ ವೇಳೆಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣ!

ವೇಗ ಪಡೆದುಕೊಂಡ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾಮಗಾರಿ – 2025 ರ ವೇಳೆಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣ!

ಅಯೋಧ್ಯೆ ರಾಮಮಂದಿರ ಜನವರಿ 22 ರಂದು ಲೋಕಾರ್ಪಣೆಗೊಂಡಿದೆ. 25 ಲಕ್ಷಕ್ಕೂ ಅಧಿಕ ಮಂದಿ ಬಾಲರಾಮನ ದರ್ಶನ ಪಡೆದಿದ್ದಾರೆ. ಇದೀಗ ರಾಮಮಂದಿರದ ನಿರ್ಮಾಣ ಕಾಮಗಾರಿ ಕಾರ್ಯ ಪುನರ್‌ ಆರಂಭಗೊಂಡಿದೆ.

ಈಗಾಗಲೇ ರಾಮಮಂದಿರದ 1ನೇ ಮಹಡಿ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಎರಡು ಮಹಡಿ ಕಾಮಗಾರಿ ನಡೆಯಬೇಕಿದೆ. 2025 ರ ವೇಳೆಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಹೀಗಾಗಿ ರಾಮಮಂದಿರ ನಿರ್ಮಾಣ ಕಾಮಗಾರಿ ವೇಗ ಪಡೆದುಕೊಂಡಿದೆ.

ಇದನ್ನೂ ಓದಿ: ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರೋಹಿತ್ ಶರ್ಮಾ ಫ್ಲಾಪ್ ಶೋ – ಪ್ರಮುಖ ಬ್ಯಾಟರ್‌ಗಳೇ ಕೈಕೊಟ್ಟರೆ ಮುಂದೇನು?

ಅಯೋಧ್ಯೆ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದೇವಾಲಯದಲ್ಲಿ ಮತ್ತೊಮ್ಮೆ ನಿರ್ಮಾಣ ಕಾರ್ಯ ಆರಂಭವಾಗಿದೆ. ‘ಪಾರ್ಕೋಟ’ ಕಾಮಗಾರಿ ಪೂರ್ಣಗೊಳ್ಳಬೇಕಿದೆ. 795 ಮೀಟರ್‌ನ ‘ಪರಿಕ್ರಮ’ ಗೋಡೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ಇದಲ್ಲದೆ, ದೇವಾಲಯದ ಕೆಳಗಿನ ಸ್ತಂಭದ ಮೇಲೆ ಪ್ರತಿಮಾಶಾಸ್ತ್ರದ ಕಾರ್ಯವನ್ನು ಸಹ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಮತ್ತು ಎರಡನೇ ಮಹಡಿಯಲ್ಲಿ ರಾಜಾರಾಮನ ‘ದರ್ಬಾರ್’ ಕೆಲಸವು ಈಗ ಏಕಕಾಲದಲ್ಲಿ ಪ್ರಾರಂಭವಾಗಲಿದೆ. ಇದು ಡಿಸೆಂಬರ್ 2024 ರಲ್ಲಿ ಅದು ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.

Shwetha M