ರಾಮನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ – ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠೆ ಯಶಸ್ವಿ

ರಾಮನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ – ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠೆ ಯಶಸ್ವಿ

ಕೋಟ್ಯಂತರ ಹಿಂದೂಗಳ ಕನಸು ಕೊನೆಗೂ ನನಸಾಗಿದೆ. ಕರಸೇವಕರ ಹೋರಾಟಕ್ಕೆ ಜಯ ಸಿಕ್ಕಿದೆ. ಆಯೋಧ್ಯೆ ರಾಮಮಂದಿರ ಲೋಕಾರ್ಪಣೆಗೊಂಡಿದೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ.

ಹೌದು, ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕದ ವಿಧಿವಿಧಾನ ಯಶಸ್ವಿಯಾಗಿ ನೆರವೇರಿದೆ. ನೂತನ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠೆ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಕಣ್ಣಿನ ಪಟ್ಟಿಯನ್ನು ತೆರೆದಿದ್ದಾರೆ. ಪ್ರಧಾನಿ ಮೋದಿ ಅವರು ದೇಶದ ಸಮಸ್ತ ಜನತೆಯ ಪರವಾಗಿ ಯಜಮಾನನಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇದರೊಂದಿಗೆ, ಭಕ್ತರ ದರ್ಶನಕ್ಕೆ ಬಾಲ ರಾಮ ಮುಕ್ತನಾಗಲಿದ್ದಾನೆ.

ಇದನ್ನೂ ಓದಿ: ರಾಮನಗರಿಯಲ್ಲಿ ಸಿನಿತಾರೆಯರ ದಂಡು – ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾದವರು ಯಾರೆಲ್ಲ?

ಮಧ್ಯಾಹ್ನ 12.20 ಕ್ಕೆ ಸರಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿದ್ದು 12, 45ರವರೆಗೆ ನಡೆದಿದೆ. ಸುಮಾರು 2 ಗಂಟೆಗಳ ಕಾಲ 25 ರಾಜ್ಯದಗಳ ವಿವಿಧ ಸಂಗೀತ ವಾದ್ಯಗಳ ಮಂಗಲ ಧ್ವನಿ ಕಾರ್ಯಕ್ರಮವೂ ನೆರವೇರಿದೆ. ಈ ಮಹತ್ವದ ಸಮಾರಂಭವನ್ನು ಜಾಗತೀಕರಣಗೊಳಿಸುವ ನಿಟ್ಟಿನಲ್ಲಿ ವಿವಿಧ 50 ದೇಶಗಳನ್ನು ಪ್ರತಿನಿಧಿಸುವ 92 ವಿಶೇಷ ಆಹ್ವಾನಿತರು ಈ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದಾರೆ.

ಈ ವೈಭವೋಪೇತ ಕಾರ್ಯಕ್ರಮಕ್ಕೆ ದೇಶದ ವಿವಿಧ ವಲಯಗಳ 7 ಸಾವಿರಕ್ಕೂ ಅಧಿಕ ಗಣ್ಯರು ಭಾಗಿಯಾಗುತ್ತಿದ್ದಾರೆ. ಕ್ರಿಕೆಟ್ ಜಗತ್ತು, ಚಲನಚಿತ್ರ ಜಗತ್ತು, ಸಂತ ಸಮಾಜ, ರಾಜಕೀಯ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಮತ್ತು ಇತರ ಕ್ಷೇತ್ರಗಳ ವಿಶೇಷ ಅತಿಥಿಗಳನ್ನು ಈ ಭವ್ಯ ಸಮಾರಂಭಕ್ಕೆ ಹಾಜರಾಗಿದ್ದಾರೆ. ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್, ಉದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಮತ್ತು ಕ್ರೀಡಾ ಐಕಾನ್ ಸಚಿನ್ ತೆಂಡೂಲ್ಕರ್ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಪ್ರಮುಖ ವ್ಯಕ್ತಿಗಳಲ್ಲಿ ಸೇರಿದ್ದಾರೆ.

ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಶ್ರೀರಾಮ ಲಲ್ಲಾ ವಿಗ್ರಹವನ್ನು ಗುರುವಾರ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗಿದ್ದು, ಇದೇ ವಿಗ್ರಹಕ್ಕೆ ಸೋಮವಾರ ಪ್ರಾಣ ಪ್ರತಿಷ್ಠಾಪನೆ ನಡೆದಿದೆ.

Shwetha M