ಅಯೋಧ್ಯೆ ರಾಮಮಂದಿರದ ಲೋಕಾರ್ಪಣೆ – ಅಮೆರಿಕಾ, ಫ್ರಾನ್ಸ್, ಮಾರಿಷಸ್‌ನಲ್ಲೂ ರಾಮಭಕ್ತರ ಜಯಘೋಷ!

ಅಯೋಧ್ಯೆ ರಾಮಮಂದಿರದ ಲೋಕಾರ್ಪಣೆ – ಅಮೆರಿಕಾ, ಫ್ರಾನ್ಸ್, ಮಾರಿಷಸ್‌ನಲ್ಲೂ ರಾಮಭಕ್ತರ ಜಯಘೋಷ!

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಸೋಮವಾರ ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಎಲ್ಲ ಭಕ್ತರಿಗೂ ರಾಮಲಲ್ಲಾ ಇಂದು ದರ್ಶನ ನೀಡಿದ್ದಾನೆ. ಈಗಾಗಲೇ ಸಾಕಷ್ಟು ಗಣ್ಯರು, ರಾಜಕೀಯ ನಾಯಕರು, ಸಿನಿಮಾ ನಟ, ನಟಿಯರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ – ಇದು ಭಾವನಾತ್ಮಕ ಕ್ಷಣ ಎಂದ ಮೋದಿ

ಅಯೋಧ್ಯೆಯಲ್ಲಿ 70 ಎಕರೆಯಲ್ಲಿ ಸ್ಥಳದಲ್ಲಿ ಭವ್ಯವಾಗಿ ತಲೆ ಎತ್ತಿ ನಿಂತಿರುವ ರಾಮಮಂದಿರಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಶಾಸ್ತ್ರ ನೆರವೇರಿದೆ. ಭಾರತದಲ್ಲಿ ಹಬ್ಬದ ಸಡಗರವೇ ಮನೆ ಮಾಡಿದ್ದರೇ ಅತ್ತ ವಿದೇಶಗಳಲ್ಲೂ ರಾಮನ ಭಕ್ತರು ವಿವಿಧ ರೀತಿಯಲ್ಲಿ ತಮ್ಮ ಇಷ್ಟದ ದೇವರಿಗೆ ಗೌರವ ಸಮರ್ಪಣೆ ಮಾಡಿದ್ದಾರೆ. ಮಾರಿಷಸ್ ದೇಶದಲ್ಲಿ ರಾಮಭಕ್ತರು ದೊಡ್ಡ ರ್ಯಾಲಿಯನ್ನು ನಡೆಸಿದ್ದಾರೆ. ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಾರಿಷಸ್​ನಲ್ಲಿರುವ ಹಿಂದುಗಳು ಬೃಹತ್ ಪ್ರಮಾಣದಲ್ಲಿ ಕಾರ್ ರ್ಯಾಲಿ ಮಾಡುವ ಮೂಲಕ ಶ್ರೀರಾಮನಿಗೆ ಗೌರವ ಸಮರ್ಪಣೆ ಮಾಡಿದರು.

ಇನ್ನು ಫ್ರಾನ್ಸ್​ನಲ್ಲಿರುವ ಹಿಂದೂಗಳು ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಾಚರಣೆ ಮಾಡಿದರು. ಅಲ್ಲಿನ ಹಿಂದೂಗಳು ತಮ್ಮ ಕಾರುಗಳಿಗೆ ಕೇಸರಿ ಬಾವುಟ ಕಟ್ಟಿಕೊಂಡು ಪ್ರಮುಖ ನಗರದ ರಸ್ತೆಗಳಲ್ಲಿ ಸಾಲುಗಟ್ಟಿ ಸಂಚಾರ ಮಾಡಿದರು. ಈ ವೇಳೆ ಜೈ ಶ್ರೀರಾಮ್ ಎಂದು ಘೋಷಣೆ ಕೂಡ ಕೂಗಿದರು. ಫ್ರಾನ್ಸ್​, ಅಮೆರಿಕದ ಸ್ಯಾನ್​ ಫ್ರಾನ್ಸಿಸ್ಕೋದಲ್ಲಿ ಹಿಂದೂಗಳು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಸೆಲೆಬ್ರೆಷನ್ ಮಾಡಿದಂತೆ ಥೈಲ್ಯಾಂಡ್​ನಲ್ಲೂ ಹಿಂದೂಗಳ ಸಂಭ್ರಮಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅಮೆರಿಕದ ಸ್ಯಾನ್​ ಫ್ರಾನ್ಸಿಸ್ಕೋದಲ್ಲಿ ಹಿಂದೂಗಳ ಸಂಭ್ರಮಾಚರಣೆಯಲ್ಲಿ ಮುಳುಗಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಭಗವಾಧ್ವಜ ಹಿಡಿದು ಸಂಭ್ರಮಾಚರಣೆ ಮಾಡಿದರು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಅಮೆರಿಕದ ನ್ಯೂಯಾರ್ಕ್​ ಟೈಮ್ಸ್ ಸ್ಕ್ವಾರ್​ನಲ್ಲಿ ಭಗವಾನ್ ಶ್ರೀರಾಮನ ಚಿತ್ರಗಳನ್ನು ಎಲ್​​ಇಡಿಗಳಲ್ಲಿ ಪ್ರದರ್ಶನ ಮಾಡಲಾಯಿತು.

Shwetha M