ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ಸಂಪೂರ್ಣ ನಿಷೇಧ!

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ಸಂಪೂರ್ಣ ನಿಷೇಧ!

ಅಯೋಧ್ಯೆ ರಾಮಮಂದಿರಕ್ಕೆ ತೆರಳುವವರಿಗೆ ಮಹತ್ವದ ಸುದ್ದಿಯೊಂದಿದೆ. ರಾಮ ಮಂದಿರದ ಆವರಣದಲ್ಲಿ ಮೊಬೈಲ್‌ ಫೋನ್‌ ಬಳಕೆ ನಿಷೇಧ ಮಾಡಲಾಗಿದೆ.

ಇದನ್ನೂ ಓದಿ: IPL ಟ್ರೋಫಿಗೆ ಮುತ್ತಿಕ್ಕಿದ KKR  – RCB & ಕೊಹ್ಲಿಗೆ ಸಿಕ್ಕ ಹಣವೆಷ್ಟು? 

ಹೌದು,  ರಾಮಮಂದಿರ ಟ್ರಸ್ಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದಲ್ಲಿ ಸಾರ್ವಜನಿಕರು ಮೊಬೈಲ್ ಕೊಂಡೊಯ್ಯುವುದನ್ನು ಈಗಾಗಲೇ ನಿಷೇಧಿಸಲಾಗಿತ್ತು ಆದರೆ ಈಗ ವಿಐಪಿಗಳು ಮತ್ತು ವಿವಿಐಪಿಗಳು ಮೊಬೈಲ್ ಫೋನ್ ಕೊಂಡೊಯ್ಯುವುದನ್ನು ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟ್  ಮಾಹಿತಿ ನೀಡಿದೆ.

ರಾಮ ಮಂದಿರಕ್ಕೆ ಬರುವ ಭಕ್ತರ ಮೊಬೈಲ್‌ಗಳನ್ನು ಇಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಜನರು ತಮ್ಮ ಮೊಬೈಲ್ ಜೊತೆಗೆ ಇತರ ಬೆಲೆಬಾಳುವ ವಸ್ತುಗಳನ್ನು ಇಟ್ಟುಕೊಳ್ಳಬಹುದು. ಇಂತಹ ಪರಿಸ್ಥಿತಿಯಲ್ಲಿ ಜನರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನದ ಆವರಣದಲ್ಲಿ ಸುವ್ಯವಸ್ಥೆ ಕಾಪಾಡಲು ಟ್ರಸ್ಟ್‌ಗೆ ಸಹಕರಿಸಬೇಕು ಎಂದು ರಾಮಮಂದಿರ ಟ್ರಸ್ಟ್‌ ತಿಳಿಸಿದೆ.

ದೇವಾಲಯದ ಶಂಕುಸ್ಥಾಪನೆ ಜನವರಿ 22 ರಂದು ನಡೆಯಿತು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯನ್ನು ಈ ವರ್ಷದ ಜನವರಿ 22 ರಂದು ಪ್ರಧಾನಿ ಮೋದಿಯವರು ನೆರವೇರಿಸಿದರು. ಪ್ರಾಣ ಪ್ರತಿಷ್ಠೆಯಿಂದ ಲಕ್ಷಾಂತರ ಜನರು ಭೇಟಿ ನೀಡಿದ್ದಾರೆ. ದೇವಸ್ಥಾನ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

Shwetha M