ಬಿ.ವೈ ವಿಜಯೇಂದ್ರ ಕ್ಷೇತ್ರ ಕೊನೆಗೂ ಫೈನಲ್ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ ಗೊತ್ತಾ?

ಬಿ.ವೈ ವಿಜಯೇಂದ್ರ ಕ್ಷೇತ್ರ ಕೊನೆಗೂ ಫೈನಲ್ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ ಗೊತ್ತಾ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿವೆ. ಆದರೆ ಬಿಜೆಪಿ ಈವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದ್ದು ಸಾಲು ಸಾಲು ಸಭೆ ನಡೆಸುತ್ತಿದೆ. ಮತ್ತೊಂದೆಡೆ ಟಿಕೆಟ್ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ.

ಕರ್ನಾಟಕ ವಿಧಾನಸಭಾ (Karnataka Assembly Elections 2023) ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆಗಳ ಮೇಲೆ ಸಭೆ ಮಾಡುತ್ತಿದೆ. ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ(BS Yediyurappa) ಶಿಕಾರಿಪುರದಲ್ಲಿ ಪ್ರತಿಕ್ರಿಯಿಸಿದ್ದು, ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದಿದ್ದಾರೆ. ಈಗಾಗಲೇ ಎರಡು ದಿನಗಳ ಕಾಲ ಕೋರ್ ಕಮಿಟಿ ಸಭೆ ಆಗಿದೆ. ಶಿವಮೊಗ್ಗ, ಬೆಳಗಾವಿ ಜಿಲ್ಲೆಯ ಟಿಕೆಟ್ ಗೊಂದಲಕ್ಕೆ ತೆರೆ ಬೀಳುತ್ತೆ. ಜನರ ಅಪೇಕ್ಷೆಯಂತೆ ಶಿಕಾರಿಪುರ ಕ್ಷೇತ್ರದಲ್ಲಿ ವಿಜಯೇಂದ್ರ(BY Vijayendra) ಸ್ಪರ್ಧೆ ಮಾಡುತ್ತಾರೆ. ಅತಿ ಹೆಚ್ಚು ಮತಗಳ ಅಂತರದಲ್ಲಿ ವಿಜಯೇಂದ್ರ ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಯಾವಾಗ ಬಿಡುಗಡೆಯಾಗುತ್ತೆ ಹಾಗೂ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ : ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಬಿಡುಗಡೆ – ಹಾಸನ ಟಿಕೆಟ್ ಕುಟುಂಬಕ್ಕೋ, ಕಾರ್ಯಕರ್ತರಿಗೋ?

ವಿಜಯೇಂದ್ರ ಅವರನ್ನು ವರುಣಾದಿಂದ ಕಣಕ್ಕಿಳಿಸಲು ಈಗಾಗಲೇ ಒತ್ತಡವಿದೆ, ವರುಣಾದಿಂದ ಒತ್ತಡವಿದ್ದರೂ ಶಿಕಾರಿಪುರದಿಂದ ಸ್ಪರ್ಧಿಸಬೇಕು ಎಂದು ಬಹಳ ಹಿಂದೆಯೇ ಹೇಳಿದ್ದೆ, ಹಾಗಾಗಿ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಕೆಲ ದಿನಗಳ ಹಿಂದೆಯೇ ಯಡಿಯೂರಪ್ಪ ಸ್ಪಷ್ಟಪಡಿಸಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕೂಡ ಪಕ್ಷದ ಸೂಚನೆಯಂತೆ ನಾನು ಶಿಕಾರಿಪುರ ದಲ್ಲಿ ಸ್ಪರ್ಧೆ ಮಾಡುತ್ತಿರುವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ. ಈ ಮೂಲಕ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

suddiyaana