ಭೂದೇವಿ ಮಡಿಲು ಸೇರಿದ ಕಲಾ ಸರಸ್ವತಿ – ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಸರೋಜಾದೇವಿ ಅಂತ್ಯಸಂಸ್ಕಾರ

ಭೂದೇವಿ ಮಡಿಲು ಸೇರಿದ ಕಲಾ ಸರಸ್ವತಿ – ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಸರೋಜಾದೇವಿ ಅಂತ್ಯಸಂಸ್ಕಾರ

ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ ನಿನ್ನೆ ವಿಧಿವಶರಾಗಿದ್ದಾರೆ. ಇಂದು ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಬಿ ಸರೋಜಾದೇವಿ ಅವರ  ಅಂತ್ಯಕ್ರಿಯೆ ನಡೆದಿದೆ.

ಇದನ್ನೂ ಓದಿ: ದೇವ ಸುಂದರಿಗೆ ಸಕಲ ಸರ್ಕಾರಿ ಗೌರವ – ಅಭಿನಯ ಸರಸ್ವತಿ ಅಂತ್ಯಕ್ರಿಯೆಗೆ ಜಿಲ್ಲಾಡಳಿತದಿಂದ ಸಿದ್ಧತೆ

ಬಿ.ಸರೋಜಾದೇವಿ ಅವರ ಅಂತ್ಯಸಂಸ್ಕಾರ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ತಾಯಿಯ ಸಮಾಧಿ ಪಕ್ಕವೇ ನೆರವೇರಿದೆ. ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ.

ಬೆಳಗ್ಗೆ 10 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕೊಂಡೊಯ್ದು, ಚನ್ನಪಟ್ಟಣದ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನದ ಬಳಿಕ ಹುಟ್ಟೂರಿಗೆ ತರಲಾಯಿತು. ಅಂತ್ಯಸಂಸ್ಕಾರಕ್ಕೂ ಮುನ್ನ ಅವರ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಪಲ್ಲಕ್ಕಿಯಲ್ಲಿಟ್ಟು ಅವರ ಪಾರ್ಥೀವ ಶರೀರವನ್ನು ತಂದು ಅಂತ್ಯಸಂಸ್ಕಾರ ಮಾಡಲಾಯಿತು. ಸ್ಥಳದಲ್ಲಿ ನೂರಾರು ಜನ ಸೇರಿದ್ದರು.

ಸರೋಜಾದೇವಿ ಅವರು ಗಂಡ ಹರ್ಷ ಸಮಾಧಿ ಪಕ್ಕವೇ ಅಂತ್ಯ ಸಂಸ್ಕಾರ ನಡೆಸಬೇಕು ಎಂದು  ವ್ಹಿಲ್ ಬರೆದಿದ್ರು. ಆದರೆ ಆ ಜಾಗ ಈಗ ಲೇಔಟ್, ಅಪಾರ್ಟ್ಮೆಂಟ್ ಆಗಿದೆ. ಹೀಗಾಗಿ ಅಲ್ಲಿ ಅಂತ್ಯ ಸಂಸ್ಕಾರ ಮಾಡಲು ಸಾಧ್ಯವಿಲ್ಲ. ದಶವಾರ ಅವರು ಹುಟ್ಟಿದ ಜಾಗ. ಅವರ ತಾಯಿಯನ್ನು ಅಲ್ಲೇ ಮಣ್ಣು ಮಾಡಲಾಗಿದೆ. ಹಾಗಾಗಿ ಅಲ್ಲೇ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದರು.

Shwetha M