ನವಜಾತ ಶಿಶುಗಳ ಮರಣ ತಡೆಗಟ್ಟಲು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ – ಬೇಬಿ ಆಂಬ್ಯುಲೆನ್ಸ್‌ಗೆ ಚಾಲನೆ

ನವಜಾತ ಶಿಶುಗಳ ಮರಣ ತಡೆಗಟ್ಟಲು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ – ಬೇಬಿ ಆಂಬ್ಯುಲೆನ್ಸ್‌ಗೆ ಚಾಲನೆ

ಶಿಶುಮರಣ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನವಜಾತ ಶಿಶುಗಳ ತುರ್ತು ಚಿಕಿತ್ಸೆಗಾಗಿ ಬೇಬಿ ಆಂಬ್ಯುಲೆನ್ಸ್‌ಗೆ ಚಾಲನೆ ನೀಡಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಈ ಮಹತ್ತರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ಬೇಡಿಕೆ ಈಡೇರುವವರೆಗೂ ಆಹೋರಾತ್ರಿ ಪ್ರತಿಭಟನೆ – ಆಶಾ ಕಾರ್ಯಕರ್ತೆಯರ ನೋವಿಗೆ ಸರ್ಕಾರ ಸ್ಪಂದಿಸುತ್ತಾ?

ಹುಟ್ಟಿದ ಮಗುವಿನಿಂದ ಹಿಡಿದು ಐದು ವರ್ಷದೊಳಗಿನ ಮಕ್ಕಳ ತುರ್ತು ಚಿಕಿತ್ಸೆಗಾಗಿ ಮತ್ತು ನವಜಾತ ಶಿಶುಗಳಿಗಾಗಿ ಬೇಬಿ ಅಂಬುಲೆನ್ಸ್‌ಗೆ ಚಾಲನೆ ಸಿಕ್ಕಿದೆ. ತಾಯಿಯ ಗರ್ಭದಿಂದ ಬರುವ ಮಗು ಹೊರಗಿನ ಜಗತ್ತಿಗೆ ಹೊಂದಿಕೊಳ್ಳಲು ಹರಸಾಹಸ ಪಡುತ್ತದೆ. ಈ ಸಂದರ್ಭದಲ್ಲಿ ನವಜಾತ ಶಿಶುಗಳಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಮಗುವನ್ನು ಶಿಫ್ಟ್ ಮಾಡುವಾಗ ತುರ್ತು ಆರೋಗ್ಯ ಸೇವೆ ಒದಗಿಸಲು ರಾಜ್ಯದಲ್ಲಿ ಮೊದಲ ಬಾರಿಗೆ ನವಜಾತ ಶಿಶುಗಳ ಆಂಬುಲೆನ್ಸ್ ಸೇವೆಯನ್ನು ರಾಜ್ಯ ಆರೋಗ್ಯ ಇಲಾಖೆ ಪ್ರಾರಂಭಿಸಿದೆ. ಬೇಬಿ ಆಂಬುಲೆನ್ಸ್ ಗಳು ಬೆಂಗಳೂರು ಮಾತ್ರವಲ್ಲದೇ ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯಲ್ಲಿ ಸದ್ಯಕ್ಕೆ ಕಾರ್ಯ ನಿರ್ವಹಿಸಲಿವೆ. ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ, ಮೈಸೂರಿನ ಚಲುವಾಂಬ ಆಸ್ಪತ್ರೆ, ರಾಯಚೂರಿನ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ನವಜಾತ ಆಂಬುಲೆನ್ಸ್ ಗಳನ್ನು ನಿಗದಿಪಡಿಸಲಾಗಿದೆ. ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡುವುದರಿಂದ ಗಂಭೀರ ಅನಾರೋಗ್ಯ ಸಮಸ್ಯೆ ಇರುವ ನವಜಾತ ಶಿಶುಗಳು ಬದುಕುಳಿಯುವ ಸಾಧ್ಯತೆಗಳು ಹೆಚ್ಚಾಗಲಿದೆ. ಈ ಆಂಬುಲೆನ್ಸ್ ನಲ್ಲಿ ಪರಿಣಿತ ವೈದ್ಯರು, ನರ್ಸ್‌ಗಳು ಇರುತ್ತಾರೆ.

ಬೇಬಿ ಆಂಬುಲೆನ್ಸ್ ಗೆ ಚಾಲನೆ ಕೊಟ್ಟ ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವರವಾಗಿ ಈ ವಿಚಾರದ ಬಗ್ಗೆ ಮಾತನಾಡಿದು. ಅವಧಿಪೂರ್ವವಾಗಿ ಜನಿಸುವ ಮಗು ಮತ್ತು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವ ಶಿಶುಗಳ ಹೆಚ್ಚಿನ ಚಿಕಿತ್ಸೆಗೆ ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಈ ಆಂಬುಲೆನ್ಸ್ ಗಳು ಸಹಕಾರಿಯಾಗಲಿವೆ. ಈ ವಾಹನದಲ್ಲಿ ವೆಂಟಿಲೇಟರ್, ಆಕ್ಸಿಜನ್, ಪಲ್ಸ್‌ಗಳ ಚೆಕಪ್ ಮತ್ತು ಸೀರೆಂಜ್‌ಗಳು ಸೇರಿದಂತೆ ಆತ್ಯಾಧುನಿಕ ಜೀವ ರಕ್ಷಕ ಸಾಧನಗಳನ್ನು ಆಂಬ್ಯುಲೆನ್ಸ್ ಹೊಂದಿದೆ ಎಂದು ತಿಳಿಸಿದ್ದಾರೆ.

Sulekha