ಮಾಜಿ ಸಚಿವ ರೇವಣ್ಣಗೆ ಬಿಗ್‌ ರಿಲೀಫ್‌ – ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಜಾಮೀನು ಮಂಜೂರು

ಮಾಜಿ ಸಚಿವ ರೇವಣ್ಣಗೆ ಬಿಗ್‌ ರಿಲೀಫ್‌ – ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಜಾಮೀನು ಮಂಜೂರು

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣಗೆ  ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಿಡ್ನ್ಯಾಪ್ ಕೇಸ್‍ನಲ್ಲಿ ಈಗಾಗಲೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಇದೀಗ ಈ  ಪ್ರಕರಣದಲ್ಲೂ ಜಾಮೀನು ಸಿಕ್ಕಿದ್ದು, ರೇವಣ್ಣ ಬಂಧನದ ಭೀತಿಯಿಂದ ಪಾರಾಗಿದ್ದಾರೆ

ಇದನ್ನೂ ಓದಿ: ಪುರಿ ಜಗನ್ನಾಥ ದೇವಾಲಯದಲ್ಲಿ ಪ್ರಧಾನಿ ಮೋದಿ – ಪ್ರಧಾನಿಯನ್ನು ಕಾಣಲು ಹರಿದು ಬಂತು ಜನಸಾಗರ

ಮನೆಯ ಮಹಿಳಾ ಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಏಪ್ರಿಲ್​ 28 ರಂದು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ರೇವಣ್ಣ ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದರು. ಶುಕ್ರವಾರ ಈ ಪ್ರಕರಣದ ವಿಚಾರಣೆ ನಡೆಸಿದ  42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್​ ಮೆಜಿಸ್ಟ್ರೇಟ್​ ಕೋರ್ಟ್​ (ಎಸಿಎಂಎಂ) ತೀರ್ಪು ಕಾಯ್ದಿರಿಸಿತ್ತು.

ಸೋಮವಾರ ರೇವಣ್ಣಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.  5 ಲಕ್ಷ ರೂಪಾಯಿಗಳ ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ತನಿಖೆಗೆ ಸಹಕರಿಸುವಂತೆ ಕೋರ್ಟ್​ ಸೂಚಿಸಿ ಜಾಮೀನು ನೀಡಿದೆ.

Shwetha M