ಬಳ್ಳಾರಿ ಬ್ಯಾನರ್‌ ಗಲಾಟೆ ಕೇಸ್!‌ – ಬಂಧನ ಭೀತಿಯಿಂದ ಬಳ್ಳಾರಿ ತೊರೆದ ಕಾರ್ಯಕರ್ತರು!

ಬಳ್ಳಾರಿ ಬ್ಯಾನರ್‌ ಗಲಾಟೆ ಕೇಸ್!‌ – ಬಂಧನ ಭೀತಿಯಿಂದ ಬಳ್ಳಾರಿ ತೊರೆದ ಕಾರ್ಯಕರ್ತರು!

ಬಳ್ಳಾರಿ ಬ್ಯಾನರ್‌ ಗಲಾಟೆ ಈಗ ಕ್ಷಣಕ್ಕೊಂದು ತಿರುವು ಪಡೆದುಕೊಂಡಿದೆ. ಇದೀಗ ಈ ಪ್ರಕರಣದ ಪೊಲೀಸರು ತನಿಖೆ ಚುರುಕುಗೊಂಡಿದ್ದು, ಪೊಲೀಸರು ಆರೋಪಿಗಳನ್ನ ಪತ್ತೆಹಚ್ಚುತ್ತಿದ್ದಾರೆ. ಇದೀಗ ಹಲವು ಮಂದಿ ಬಂಧನ ಭೀತಿಯಿಂದ ಬಳ್ಳಾರಿ ತೊರೆದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: 40ನೇ ವಸಂತಕ್ಕೆ ಕಾಲಿಟ್ಟ ರಾಕಿಬಾಯ್‌! – ಅಭಿಮಾನಿಗಳಿಗೆ ಪ್ರೀತಿಯ ಪತ್ರ ರಾಕಿಂಗ್‌‌ ಸ್ಟಾರ್‌ ಯಶ್

ಡಿಜಿಟಲ್ ಸಾಕ್ಷ್ಯದ ಆಧಾರವಾಗಿ ಈಗಾಗಲೇ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೇ ಬಿಜೆಪಿಯ 33 ಹಾಗೂ ಕಾಂಗ್ರೆಸ್‌ನ 30ಕ್ಕೂ ಹೆಚ್ಚು ಜನರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಶ್ರೀರಾಮುಲು, ಮಾಜಿ ಶಾಸಕ‌ ಸುರೇಶ್ ಬಾಬು, ರೆಡ್ಡಿ ಆಪ್ತ ಅಲಿಖಾನ್ ಸೇರಿದಂತೆ 33 ಜನರಿಗೆ ನೋಟಿಸ್‌ ನೀಡಲಾಗಿದೆ.

ಗಲಭೆಯಲ್ಲಿ ಭಾಗಿಯಾಗದ ಬಳ್ಳಾರಿ ನಗರದ ಮುಂಚೂಣಿ ಬಿಜೆಪಿ ಕಾರ್ಯಕರ್ತರಿಗೂ ನೋಟಿಸ್‌ ನೀಡುತ್ತಿದ್ದಾರೆ. ಗಲಭೆಯಲ್ಲಿ ಭಾಗಿಯಾಗದಿದ್ದರೂ 39 ವಾರ್ಡ್‌ಗಳ ಅನ್ವಯ ಲಿಸ್ಟ್ ಮಾಡಿ ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ದೃಶ್ಯಗಳನ್ನು ಆಧರಿಸಿ 107 ಮಂದಿಗೆ ನೋಟಿಸ್‌ ಕೊಡಲಾಗಿದೆ. ಇದರಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Shwetha M