ಜೂನ್1ರಿಂದ ಜುಲೈ 31ರವರೆಗೆ ಮೀನು ಹಿಡಿಯುವಂತಿಲ್ಲ..!- ಎರಡು ತಿಂಗಳು ಮೀನುಗಾರಿಕೆಗೆ ನಿಷೇಧ

ಜೂನ್1ರಿಂದ ಜುಲೈ 31ರವರೆಗೆ ಮೀನು ಹಿಡಿಯುವಂತಿಲ್ಲ..!- ಎರಡು ತಿಂಗಳು ಮೀನುಗಾರಿಕೆಗೆ ನಿಷೇಧ

ತಾಜಾ ತಾಜಾ ಮೀನು ತಿನ್ನಲು ಕರಾವಳಿ ಮಂದಿ ಇನ್ನೆರಡು ತಿಂಗಳು ಕಾಯಲೇಬೇಕು. ಎಂದಿನಂತೆ ಪಶ್ಚಿಮ ಕರಾವಳಿಯಲ್ಲಿ ಮೀನುಗಾರಿಕಾ ಋತು ಮುಕ್ತಾಯವಾಗಿದೆ. ಜೂನ್‌1ರಿಂದ ಜುಲೈ 31ರ ವರೆಗೆ ಆಳಸಮುದ್ರ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಇದ್ರಿಂದಾಗಿ ಮೀನಿನ ದರ ಕೂಡಾ ಜಾಸ್ತಿಯಾಗಲಿದೆ.

ಇದನ್ನೂ ಓದಿ: ಅಡುಗೆ ಎಣ್ಣೆ ಬೆಲೆ ಬಾರಿ ಇಳಿಕೆ! – ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದ್ದೇನು?

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಮೀನುಗಾರಿಕೆ ಪ್ರಮುಖ ಉದ್ಯಮ. ಮೀನುಗಾರಿಕೆಯಲ್ಲಿ ಸಾವಿರಾರು ಕೋಟಿ ವಹಿವಾಟು ನಡೆಯುವ ಈ ಉದ್ಯಮದಲ್ಲಿ ವರ್ಷದಲ್ಲಿ ಎರಡು ತಿಂಗಳು ರಜಾ ಅವಧಿ ಇರುತ್ತದೆ. ಪ್ರತಿ ವರ್ಷ ಆಗಸ್ಟ್ ತಿಂಗಳಿಂದ ಮೇ ತಿಂಗಳವರೆಗೆ ಪಶ್ಚಿಮ ಕರಾವಳಿಯಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಇರುತ್ತದೆ. ಈ ಸಂದರ್ಭದಲ್ಲಿ ಪಶ್ಚಿಮ ಕರಾವಳಿಯಿಂದ ಸಾವಿರಾರು ಮೀನುಗಾರಿಕಾ ಬೋಟ್‌ಗಳು ಆಳ ಸಮುದ್ರ ಮೀನುಗಾರಿಕೆ ನಡೆಸುತ್ತವೆ. ಆಳ ಮೀನುಗಾರಿಕಾ ಉದ್ಯಮಕ್ಕೆ ಜೂನ್ ಮತ್ತು ಜುಲೈ ತಿಂಗಳು ರಜಾ ಅವಧಿಯಾಗಿದೆ. ಈ ಅವಧಿಯಲ್ಲಿ ಮೀನುಗಾರಿಕೆ ನಡೆಸದಂತೆ ಸರ್ಕಾರ ನಿಷೇಧ ವಿಧಿಸುತ್ತದೆ. ಜೂನ್ 1 ರಿಂದ 61 ದಿನಗಳ ಕಾಲ ನಿಷೇಧ ಹೇರಲಾಗುತ್ತದೆ. ಮಳೆಗಾಲದ ಆರಂಭದ ಎರಡು ತಿಂಗಳ ಅವಧಿಯಲ್ಲಿ ಮೀನುಗಳು ಸಂತಾನೋತ್ಪತ್ತಿ ಮಾಡುವ ಸಮಯವಾಗಿರುತ್ತದೆ. ಮೀನುಗಳು ಈ ಅವಧಿಯಲ್ಲಿ ಮೊಟ್ಟೆಯನ್ನಿಡುವುದರಿಂದ ಅವುಗಳ ಸಂತತಿ ಹೆಚ್ಚಲಿದೆ. ಈ ಸಂದರ್ಭದಲ್ಲಿ ಮೀನುಗಾರಿಕೆ ನಡೆಸಿದರೆ ಮೀನುಗಳ ಸಂತತಿ ಕಡಿಮೆ ಆಗಿ ಮತ್ಸ್ಯ ಕ್ಷಾಮ ಆಗುವ ಸಾಧ್ಯತೆ ಇದೆ. ಇದರ ಜೊತೆಗೆ ಮಳೆಗಾಲದ ಆರಂಭದ ಈ ಅವಧಿಯಲ್ಲಿ ಅರಬ್ಬಿ ಸಮುದ್ರ ರೌದ್ರಾವತಾರ ತಾಳುವ ಸಾಧ್ಯತೆಯೂ ಇರುತ್ತದೆ. ಈ ಕಾರಣದಿಂದಾಗಿ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗೆ ತೆರಳದೆ ರಜೆಯಲ್ಲಿರುತ್ತಾರೆ. ಮೀನುಗಾರಿಕಾ ನಿಷೇಧದ ಹಿನ್ನೆಲೆಯಲ್ಲಿ ಬಹುತೇಕ ಯಾಂತ್ರಿಕ ಬೋಟುಗಳು ಮಂಗಳೂರು ದಕ್ಕೆಯಲ್ಲಿ ಲಂಗರು ಹಾಕಿವೆ.

suddiyaana