ಸಿಲಿಕಾನ್‌ ಸಿಟಿಯಲ್ಲಿ ಉಸಿರಾಡುವುದೇ ಕಷ್ಟ ಕಷ್ಟ..! – ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ

ಸಿಲಿಕಾನ್‌ ಸಿಟಿಯಲ್ಲಿ ಉಸಿರಾಡುವುದೇ ಕಷ್ಟ ಕಷ್ಟ..! – ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ವಾಯುಗುಣಮಟ್ಟ ಕುಸಿಯುತ್ತಿದೆ. ಇದೀಗ ಬೆಂಗಳೂರಿನಲ್ಲಿ ಮತ್ತಷ್ಟು ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ.

ಇದನ್ನೂ ಓದಿ: ಸ್ವಂದನಾಳನ್ನ ಸೇವ್‌ ಮಾಡಲು ಸೂರಜ್‌, ಮಾಳು ಎಲಿಮಿನೇಟ್?‌ – ದತ್ತು ಪುತ್ರಿಯನ್ನ ಉಳಿಸಲು ಬಿಗ್‌ಬಾಸ್‌ ಹೊಸ ಆಟ?

ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ PM2.5 86 ಇದ್ದರೆ, PM10 119 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಬೆಂಗಳೂರಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಮಿತಿಗಿಂತ 5 ಪಟ್ಟು ಹೆಚ್ಚಿರುವ ಸೂಕ್ಷ್ಮ ಕಣಗಳ ಪ್ರಮಾಣ ಆತಂಕಕಾರಿಯಾಗಿದೆ.

ಬೆಂಗಳೂರಿನ ಏರ್ ಕ್ವಾಲಿಟಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಗಾಳಿಯ ಗುಣಮಟ್ಟ 150 ದಾಟಿದರೆ ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ರೋಗಗಳೂ ಬರಬಹುದೆಂದು ತಜ್ಞರು ಹೇಳುತ್ತಾರೆ. ಬೆಂಗಳೂರಿನಲ್ಲಿ 1.2 ಕೋಟಿ ದಾಟಿರುವ ವಾಹನಗಳಿಂದ ಹೊರಸೂಸುವ ಹೊಗೆ ನಗರದ ಮಾಲಿನ್ಯಕ್ಕೆ ಕೊಡುಗೆ ನೀಡುತ್ತಿದೆ. ಸಂಚಾರ ದಟ್ಟಣೆ ಹೆಚ್ಚಿರುವ ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಂತಹ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟವು ನಗರದ ಸರಾಸರಿಗಿಂತ 30% ಹೆಚ್ಚು ದಾಖಲಾಗುತ್ತಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ
ಬೆಂಗಳೂರು –173
ಮಂಗಳೂರು-136
ಮೈಸೂರು – 174
ಬೆಳಗಾವಿ – 142
ಕಲಬುರ್ಗಿ – 107
ಶಿವಮೊಗ್ಗ – 73
ಬಳ್ಳಾರಿ – 185
ಹುಬ್ಬಳ್ಳಿ- 96
ಉಡುಪಿ –110
ವಿಜಯಪುರ –117
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
ಉತ್ತಮ- 0-50
ಮಧ್ಯಮ – 50-100
ಕಳಪೆ – 100-150
ಅನಾರೋಗ್ಯಕರ – 150-200
ಗಂಭೀರ – 200 – 300
ಅಪಾಯಕಾರಿ – 300 -500+

Shwetha M