ಬಜೆಟ್‌ನಲ್ಲಿ ‘ಬೆಂಗಳೂರು ಸಮಗ್ರ ಅಭಿವೃದ್ಧಿ’ಯ ಮಂತ್ರ
ಸಂಚಾರ ದಟ್ಟಣೆ ಇರುವ 75 ಜಂಕ್ಷನ್‌ಗಳಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ

ಬಜೆಟ್‌ನಲ್ಲಿ ‘ಬೆಂಗಳೂರು ಸಮಗ್ರ ಅಭಿವೃದ್ಧಿ’ಯ ಮಂತ್ರಸಂಚಾರ ದಟ್ಟಣೆ ಇರುವ 75 ಜಂಕ್ಷನ್‌ಗಳಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ

ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್‌ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.

ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ಆದ್ಯತೆ ನೀಡಲಾಗಿದೆ. ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

suddiyaana