ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್!‌ – ಟಿಕೆಟ್‌ ದರ ಏರಿಕೆಗೆ ಗ್ರೀನ್‌ ಸಿಗ್ನಲ್‌ ಕೊಟ್ಟ BMRCL

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್!‌ – ಟಿಕೆಟ್‌ ದರ ಏರಿಕೆಗೆ ಗ್ರೀನ್‌ ಸಿಗ್ನಲ್‌ ಕೊಟ್ಟ BMRCL

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್‌ ಸುದ್ದಿಯಿದೆ. ಮತ್ತೆ ನಮ್ಮ ಮೆಟ್ರೋ ದರ ಏರಿಕೆಯಾಗಿದೆ. ಮೆಟ್ರೋ ದರ ಏರಿಕೆಗೆ ಈಗ ಬಿಎಂಆರ್‌ಸಿಎಲ್‌ ಗ್ರೀನ್‌ ಸಿಗ್ನಲ್‌ ನೀಡಿದೆ.

ಇದನ್ನೂ ಓದಿ: ಅಬಕಾರಿ ಸಚಿವ RB ತಿಮ್ಮಾಪುರ ರಾಜೀನಾಮೆಗೆ ಪಟ್ಟು – ಸದನದಲ್ಲೇ ಪ್ರತಿಪಕ್ಷಗಳ ಅಹೋರಾತ್ರಿ ಧರಣಿ

ಕಳೆದ ವರ್ಷ ಫೆಬ್ರವರಿ 9ರಂದು ಮೆಟ್ರೋ ಟಿಕೆಟ್ ದರವನ್ನು ಶೇ101.5ರಷ್ಟು ಏರಿಸಲಾಗಿತ್ತು. ಇದಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇವಲ ಮೂರು ದಿನಗಳಲ್ಲೇ ದರವನ್ನು ಶೇ.71.5ಕ್ಕೆ ಇಳಿಸಲಾಗಿತ್ತು. ಆ ಘಟನೆ ಇನ್ನೂ ಪ್ರಯಾಣಿಕರ ಮನಸ್ಸಿಂದ ಮಾಸುವ ಮೊದಲೇ ಮತ್ತೆ ದರ ಏರಿಕೆಯ ಚರ್ಚೆ ಆರಂಭವಾಗಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ನಮ್ಮ ಮೆಟ್ರೋ ದರ ಏರಿಕೆಗೆ ಮತ್ತೆ ಬಿಎಂಆರ್‌ಸಿಎಲ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಬೋರ್ಡ್ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.

ಇನ್ನು ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ ಅಧಿಕಾರಿಗಳು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗೊಂದಲದ ನಡುವೆ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಅಣಿಯಾಗಿದ್ದನ್ನು ಸಂಸದ ತೇಜಸ್ವಿ ಸೂರ್ಯ ವಿರೋಧಿಸಿದ್ದರು. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರವನ್ನೂ ಬರೆದಿದ್ದರು.

ನಿಗಮದ ಈ ನಿರ್ಧಾರದ ಕುರಿತು ಪ್ರಯಾಣಿಕರೂ ಆಕ್ರೋಶ ಹೊರಹಾಕಿದ್ದರು. ಈ ವರ್ಷ ಮಾಡಿರುವ ದರ ಏರಿಕೆ ತಪ್ಪಿನಿಂದ ಮುಂದಿನ ವರ್ಷಗಳಲ್ಲೂ ಪ್ರಯಾಣಿಕರಿಗೆ ಹೆಚ್ಚುವರಿ ಹೊರೆ ಆಗಲಿದೆ. ಮೊದಲು ತಪ್ಪು ಲೆಕ್ಕ ಕೊಟ್ಟು ಏರಿಕೆ ಮಾಡಿರುವ ದರವನ್ನು ಇಳಿಸಲಿ,ನಂತರ ಪ್ರತಿವರ್ಷ ಬೇಕಾದರೆ 5% ರಷ್ಟು ಏರಿಕೆ ಮಾಡಲಿ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದರು. ಆದರೆ ಈ ಎಲ್ಲಾ ವಿರೋಧದ ನಡುವೆಯೂ ಮೆಟ್ರೋ ದರ ಏರಿಕೆಗೆ ನಿಗಮ ಗ್ರೀನ್ ಸಿಗ್ನಲ್ ಕೊಟ್ಟಿದೆ.

Shwetha M