ರೈತರಿಗೆ ಶಾಕ್‌ ನೀಡಿದ ಹಾಲು ಒಕ್ಕೂಟ! – ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ರೈತರಿಗೆ ಶಾಕ್‌ ನೀಡಿದ ಹಾಲು ಒಕ್ಕೂಟ! – ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ಬೆಂಗಳೂರು: ಹಾಲು ಒಕ್ಕೂಟ ರೈತರಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದೆ. ರೈತರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಲೀಟರ್‌ ಗೆ 1.5 ರೂಪಾಯಿಯಷ್ಟು ಕಡಿತಗೊಳಿಸುವುದಾಗಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಯಾವ ಜಿಲ್ಲೆಗಳಲ್ಲಿ ವರುಣನ ಅಬ್ಬರ?

ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಕಳೆದ ಏಪ್ರಿಲ್‌ 1 ರಿಂದ ಲೀಟರ್‌ ಗೆ 2.85 ರೂಪಾಯಿ ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಏಪ್ರಿಲ್‌ 1 ರಿಂದ ಮೇ 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.

ಎರಡು ತಿಂಗಳ ಹಿಂದೆ ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿತ್ತು. ನಂತರ ದಿನಗಳಲ್ಲಿ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದ ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ. ಇದರಿಂದ ಅದು 16 ಲಕ್ಷ ಲೀಟರ್​ಗೆ ತಲುಪುವ ಮೂಲಕ ದಿನದಲ್ಲಿ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಹೀಗಾಗಿ ಜಿಲ್ಲಾ ಹಾಲು ಒಕ್ಕೂಟ ಲೀಟರ್​​ಗೆ 1.50 ರೂ. ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಆದೇಶ ಹೊರಡಿಸಿದೆ.

suddiyaana